Andolana originals

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್ ಗಳ ಮೂಲಕ ಸಾರ್ವಜನಿಕರು ಪ್ರಮುಖವಾಗಿ ರೈಲು, ಬಸ್ ನಿಲ್ದಾಣಗಳು ಸೇರಿದಂತೆ ಇನ್ನಿತರ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಲುಪುವುದಕ್ಕಾಗಿ ಆಪ್‌ಗಳ ಮೂಲಕವೇ ಆಟೋರಿಕ್ಷಾ, ಸ್ಕೂಟರ್, ಕಾರ್‌ಗಳನ್ನು ಬುಕ್ ಮಾಡುವ ಸಂದರ್ಭದಲ್ಲಿ ಆಪ್‌ಗಳು ತೋರಿಸುವ ನಿಗದಿತ ದರಕ್ಕೆ ಆಧರಿಸಿ ಬುಕ್ ಮಾಡುವಾಗ ೫-೧೦ ನಿಮಿಷಗಳವರೆಗೂ ಬುಕಿಂಗ್ ಪಡೆಯದೆ ಸಮಯ ವ್ಯರ್ಥ ಮಾಡಿಸುವುದರ ಜೊತೆಗೆ ಅದಕ್ಕನುಣವಾಗಿ ೧೦ರೂ., ೨೦ರೂ., ೩೦ರೂ., ೪೦ರೂ., ೫೦.ರೂಗಳಿಗೂ ಅಧಿಕ ಮೊತ್ತವನ್ನು ಸೇರಿಸಿ ಬುಕ್ ಮಾಡಿದರೆ ತಕ್ಷಣವೇ ಬುಕಿಂಗ್ ಪಡೆಯುವುದಾಗಿ ಸೂಚನೆಗಳನ್ನು ತೋರಿಸುತ್ತಾರೆ.

ದಿನ-ದಿನಕ್ಕೆ ಇದು ಒಂದು ರೀತಿಯಲ್ಲಿ ಹಗಲು ದರೋಡೆಯಂತಾಗುತ್ತಿದೆ. ಆಮೂಲಕ ಸಾರ್ವಜನಿಕರಿಂದ ಹೆಚ್ಚಿನ ಹಣವನ್ನು ಪಡೆಯುತ್ತಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಕೂಡಲೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯವನ್ನು ಸರ್ಕಾರದ ಗಮನಕ್ಕೆ ತಂದು ಹಿಂದೆ ಇದ್ದಂತಹ ಮೀಟರ್‌ಗಳ ದರದ ಮೂಲಕವೇ ಆಟೋರಿಕ್ಷಾದಿಂದ ಅನುಕೂಲ ಪಡೆಯಲು ಸೂಚನೆ ನೀಡುವುದರೊಂದಿಗೆ, ಕಾರು ಮತ್ತು ಸ್ಕೂಟರ್‌ಗಳಿಗೆ ಪ್ರತಿ ಕಿಲೋ ಮೀಟರ್‌ಗೆ ನಿಗದಿತ ದರ ನಿಗದಿಪಡಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗಮನ ಹರಿಸಬೇಕಾಗಿದೆ.

-ನಾಗೇಶ್ , ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

17 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

18 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

19 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

19 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

19 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

22 hours ago