Categories: Andolana originals

ಓದುಗರ ಪತ್ರ: ಸುಳ್ಳು ಸಮೀಕ್ಷೆಗೆ ಕಡಿವಾಣ ಬೀಳಲಿ

ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಬಿತ್ತರಿಸುತ್ತಿರುವ ಚುನಾವಣಾ ಪೂರ್ವ ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗುತ್ತಿದ್ದು, ಸಮೀಕ್ಷೆಗಳ ಫಲಿತಾಂಶಕ್ಕೂ ನೈಜ ಫಲಿತಾಂಶಕ್ಕೂ ಅಜಗಜಾಂತರ ವ್ಯತ್ಯಾಸ ಕಂಡುಬರುತ್ತಿದೆ. ಮತಗಟ್ಟೆ ಸಮೀಕ್ಷೆಗಳನ್ನು ನಂಬಿಕೊಂಡು ಕೆಲವರು ತಮ್ಮ ಹಣ, ಆಸ್ತಿಗಳನ್ನು ಬೆಟ್ಟಿಂಗ್ ಕಟ್ಟಿ ಸೋಲುತ್ತಿದ್ದಾರೆ. ಇತ್ತೀಚೆಗೆ ನಡೆದ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆಗಳು ಹಾಗೂ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ತಲೆಕೆಳಗಾಗುವಂತೆ ಮಾಡಿದೆ. ಇತ್ತೀಚೆಗೆ ನಡೆದ ಎಲ್ಲ ಚುನಾವಣೆ ಸಮೀಕ್ಷೆಗಳು ಸಂಪೂರ್ಣ ಸುಳ್ಳಾಗಿದ್ದು, ಜನರಿಗೆ ಸಮೀಕ್ಷೆಗಳ ಮೇಲೆ ವಿಶ್ವಾಸ ಇಲ್ಲದಂತಾಗಿದೆ. ಅಲ್ಲದೆ ಮತದಾರರ ಮನಸ್ಸನ್ನು ಯಾರೂ ಅರಿಯಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಚುನಾವಣಾ ಪೂರ್ವ ಸಮೀಕ್ಷೆ ಮಾಡುವವರು ವಾಸ್ತವ ಸ್ಥಿತಿಯನ್ನು ಅರಿಯದೆ, ಕ್ಷೇತ್ರಕ್ಕೆ ಭೇಟಿ ನೀಡಿ ಹೆಚ್ಚು ಜನರ ಅಭಿಪ್ರಾಯವನ್ನೂ ಸಂಗ್ರಹಿಸದೇ ಕಾಟಾಚಾರಕ್ಕೆ ತಮ್ಮಿಷ್ಟದಂತೆ ಸಮೀಕ್ಷೆ ವರದಿ ನೀಡುತ್ತಿದ್ದಾರೆ. ಅಲ್ಲದೆ ಆಸೆ, ಆಮಿಷಗಳಿಗೆ ಬಲಿಯಾಗಿ ರಾಜಕೀಯ ಪಕ್ಷಗಳನ್ನು ಮೆಚ್ಚಿಸುವ ಸಲುವಾಗಿ ಅವರ ಪರವಾಗಿಯೂ ಸಮೀಕ್ಷೆ ವರದಿ ನೀಡುತ್ತಿದ್ದಾರೇನೋ ಎಂಬ ಅನುಮಾನ ಮೂಡುತ್ತದೆ. ಇಂತಹ ಮತಗಟ್ಟೆ ಸಮೀಕ್ಷೆಗಳು ಸಾಕಷ್ಟು ಲೋಪದಿಂದ ಕೂಡಿದ್ದು, ಚುನಾವಣಾ ಆಯೋಗ ಇಂತಹ ಸುಳ್ಳು ಸಮೀಕ್ಷೆಗಳಿಗೆ ಕಡಿವಾಣ ಹಾಕಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago