ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ-೨೦೨೫ರ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಯುವ ಸಂಭ್ರಮವನ್ನು ವೀಕ್ಷಣೆ ಮಾಡುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ.
ಭಾನುವಾರ ಸಂಜೆ ೬: ೩೦ರ ವೇಳೆಯಲ್ಲಿ ಬಯಲು ರಂಗಮಂದಿರದ ಗೇಟ್‌ನಲ್ಲಿ ಸಾರ್ವಜನಿಕ ಸ್ಥಳಾವಕಾಶ ಇಲ್ಲದಿದ್ದರಿಂದ ವಾಪಸ್ ತೆರಳುವಾಗ ಯಾರೋ ಒಬ್ಬರು ಮಾಡಿದ ತಪ್ಪಿಗೆ ಪೊಲೀಸರು ಏಕಾಏಕಿ ಮಹಿಳೆಯರೂ ಸೇರಿ ಅನೇಕ ಜನರಿಗೆ ಲಾಠಿ ಬೀಸಿದ್ದಾರೆ. ಮೈಸೂರು ನಗರ ಪೋಲೀಸ್ ಆಯುಕ್ತರು, ಕಾರ್ಯಕ್ರಮ ವೀಕ್ಷಣೆ ಮಾಡಲು ಸ್ಥಳಾವಕಾಶ ಇಲ್ಲದಿದ್ದರೆ ದಯವಿಟ್ಟು ಮೈಸೂರು ವಿಶ್ವವಿದ್ಯಾನಿಲಯದ ಮೂರು ಮುಖ್ಯದ್ವಾರಗಳ ಬಳಿಯಿಂದಲೇ ಸಾರ್ವಜನಿಕರನ್ನು ವಾಪಸ್ ಕಳುಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಏಕಾಏಕಿ ಲಾಠಿ ಬೀಸದಂತೆ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಬೇಕು.
– ಕೆ.ನಾಗೇಶ್, ಮಾನಸಗಂಗೋತ್ರಿ, ಮೈಸೂರು





