Andolana originals

ಓದುಗರ ಪತ್ರ : ಯುವಸಂಭ್ರಮದಲ್ಲಿ ಪೊಲೀಸರ ದೌರ್ಜನ್ಯ ನಿಲ್ಲಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ-೨೦೨೫ರ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಯುವ ಸಂಭ್ರಮವನ್ನು ವೀಕ್ಷಣೆ ಮಾಡುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ.

ಭಾನುವಾರ ಸಂಜೆ ೬: ೩೦ರ ವೇಳೆಯಲ್ಲಿ ಬಯಲು ರಂಗಮಂದಿರದ ಗೇಟ್‌ನಲ್ಲಿ ಸಾರ್ವಜನಿಕ ಸ್ಥಳಾವಕಾಶ ಇಲ್ಲದಿದ್ದರಿಂದ ವಾಪಸ್ ತೆರಳುವಾಗ ಯಾರೋ ಒಬ್ಬರು ಮಾಡಿದ ತಪ್ಪಿಗೆ ಪೊಲೀಸರು ಏಕಾಏಕಿ ಮಹಿಳೆಯರೂ ಸೇರಿ ಅನೇಕ ಜನರಿಗೆ ಲಾಠಿ ಬೀಸಿದ್ದಾರೆ. ಮೈಸೂರು ನಗರ ಪೋಲೀಸ್ ಆಯುಕ್ತರು, ಕಾರ್ಯಕ್ರಮ ವೀಕ್ಷಣೆ ಮಾಡಲು ಸ್ಥಳಾವಕಾಶ ಇಲ್ಲದಿದ್ದರೆ ದಯವಿಟ್ಟು ಮೈಸೂರು ವಿಶ್ವವಿದ್ಯಾನಿಲಯದ ಮೂರು ಮುಖ್ಯದ್ವಾರಗಳ ಬಳಿಯಿಂದಲೇ ಸಾರ್ವಜನಿಕರನ್ನು ವಾಪಸ್ ಕಳುಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಏಕಾಏಕಿ ಲಾಠಿ ಬೀಸದಂತೆ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಬೇಕು.

– ಕೆ.ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

42 mins ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

48 mins ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

57 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago