ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು ಸಾಕಷ್ಟು ಶ್ರಮ ಹಾಕಿರುತ್ತಾರೆ.
ಇಂತಹ ಸಂದರ್ಭದಲ್ಲಿ ಕೇಂದ್ರವಾಗಲಿ, ರಾಜ್ಯಸರ್ಕಾರವಾಗಲಿ ನಡೆಸುವ ಪರೀಕ್ಷೆಗಳು ಕಟ್ಟುನಿಟ್ಟಾಗಿರುವಂತೆ ನೋಡಿಕೊಳ್ಳಬೇಕು. ಸೋರಿಕೆ ಎಂಬ ಪಿಡುಗು ತಲೆಎತ್ತದಂತೆ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ಇಷ್ಟಾದರೂ ಕಾಣದ ಕೈಗಳೋ, ಕಾಣುವ ಕೈಗಳೋ ತಮ್ಮ ಕೈಚಳಕ ತೋರಿಸಿ ಪರೀಕ್ಷೆ ನಡೆಯುವ ಮುನ್ನವೇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುವಂತೆ ಮಾಡುವ ಉದಾಹರಣೆಗಳನ್ನು ನೋಡಿದ್ದೇವೆ. ನೀಟ್ ಪರೀಕ್ಷೆಯು ಇತ್ತೀಚಿನ ಉದಾಹರಣೆಯಾಗಿದೆ. ಭವಿಷ್ಯದಲ್ಲಿ ಇಂತಹ ಅಕ್ರಮಗಳು ಪುನರಾವರ್ತಿವಾಗದಂತೆ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು. ಸೋರಿಕೆ ಮಾಡುವತ್ತ ಯೋಚಿಸುವವರಿಗೆ ಶಿಕ್ಷೆಯ ಭಯ ಮೂಡಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು




