Andolana originals

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು ಸಾಕಷ್ಟು ಶ್ರಮ ಹಾಕಿರುತ್ತಾರೆ.

ಇಂತಹ ಸಂದರ್ಭದಲ್ಲಿ ಕೇಂದ್ರವಾಗಲಿ, ರಾಜ್ಯಸರ್ಕಾರವಾಗಲಿ ನಡೆಸುವ ಪರೀಕ್ಷೆಗಳು ಕಟ್ಟುನಿಟ್ಟಾಗಿರುವಂತೆ ನೋಡಿಕೊಳ್ಳಬೇಕು. ಸೋರಿಕೆ ಎಂಬ ಪಿಡುಗು ತಲೆಎತ್ತದಂತೆ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ಇಷ್ಟಾದರೂ ಕಾಣದ ಕೈಗಳೋ, ಕಾಣುವ ಕೈಗಳೋ ತಮ್ಮ ಕೈಚಳಕ ತೋರಿಸಿ ಪರೀಕ್ಷೆ ನಡೆಯುವ ಮುನ್ನವೇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುವಂತೆ ಮಾಡುವ ಉದಾಹರಣೆಗಳನ್ನು ನೋಡಿದ್ದೇವೆ. ನೀಟ್ ಪರೀಕ್ಷೆಯು ಇತ್ತೀಚಿನ ಉದಾಹರಣೆಯಾಗಿದೆ. ಭವಿಷ್ಯದಲ್ಲಿ ಇಂತಹ ಅಕ್ರಮಗಳು ಪುನರಾವರ್ತಿವಾಗದಂತೆ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು. ಸೋರಿಕೆ ಮಾಡುವತ್ತ ಯೋಚಿಸುವವರಿಗೆ ಶಿಕ್ಷೆಯ ಭಯ ಮೂಡಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago