Andolana originals

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ ತಯಾರಿಸಿದ್ದಾರೆ.

ಮಕ್ಕಳು ಧೈರ್ಯವಾಗಿ ಪರೀಕ್ಷೆ ಎದುರಿಸಲು ಸಿದ್ಧರಾಗಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ಜವಾಬ್ದಾರಿತನದಿಂದ ಈ ವರ್ಷ ಶ್ರಮಪಟ್ಟು ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗದ ಹಾಗೆ ಒಟ್ಟು ಮೂರು ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ನಡೆಸಿದ್ದಾರೆ. ಆದರೆ ಕೆಲ ಕಿಡಿಗೇಡಿಗಳು ಪರೀಕ್ಷೆಯ ಪಾವಿತ್ರ್ಯತೆ ಹಾಳು ಮಾಡಲು ಸಾಮಾಜಿಕ ಜಾಲತಾಣದಲ್ಲಿ ಹಣಕ್ಕೆ ಬೇಡಿಕೆ ಇಟ್ಟು, ‘ಪ್ರಶ್ನೆ ಪತ್ರಿಕೆ ಬೇಕಾ’ ಎಂಬ ಸಂದೇಶ ಹರಿಯಬಿಡುತ್ತಾರೆ. ಇಂತಹ ತಪ್ಪು ಸಂದೇಶಗಳಿಂದ ಯಾರೂ ಮೋಸಹೋಗಬಾರದು, ವಿದ್ಯಾರ್ಥಿಗಳು ಭ್ರಮನಿರಸನಗೊಳ್ಳಬಾರದು. ಪ್ರಶ್ನೆ ಪತ್ರಿಕೆಗಳು ಅತ್ಯಂತ ಭದ್ರತೆಯಲ್ಲಿ ಇರುತ್ತವೆ. ಪೋಷಕರು ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆಯಲು ಪ್ರೋತ್ಸಾಹಿಸಬೇಕು.

-ಎಂ. ಎಸ್. ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ. ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago