ಓದುಗರ ಪತ್ರ
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು ನಗರದಲ್ಲಿ ೧೫-೨೦ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಯಾವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ನಾಯಿ ಕಡಿತಕ್ಕೆ ನೀಡುವ ಎಆರ್‌ವಿ ಲಸಿಕೆ ದೊರೆಯದ ಕಾರಣ ಅವರನ್ನು ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಗೆ ಸಾಗಹಾಕಲಾಗುತ್ತದೆ. ಒಂದು ಎಆರ್‌ವಿ ಲಸಿಕೆ ವಯಲ್ ಓಪನ್ ಮಾಡಿದರೆ ಅದರಿಂದ ೧೦ ಜನಕ್ಕೆ ಚಿಕಿತ್ಸೆ ನೀಡಬಹುದು. ಒಂದು ಬಾರಿ ಓಪನ್ ಮಾಡಿದರೆ ಅದನ್ನು ಅಂದೇ ಉಪಯೋಗಿಸಬೇಕು. ಇಲ್ಲದಿದ್ದರೆ ವ್ಯರ್ಥವಾಗುತ್ತದೆ. ಪ್ರತಿ ದಿನ ಒಂದು ಆರೋಗ್ಯ ಕೇಂದ್ರಕ್ಕೆ ಇಷ್ಟು ಜನ ಬೀದಿ ನಾಯಿ ಕಡಿತದ ಚಿಕಿತ್ಸೆಗೆ ಬಾರದ ಕಾರಣ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇದನ್ನು ಉಪಯೋಗಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಗರದ ನಾಲ್ಕೂ ದಿಕ್ಕುಗಳ ಆಯ್ದ ಆಸ್ಪತ್ರೆಗಳಲ್ಲಿ ಎಆರ್‌ವಿ ಲಸಿಕೆ ಲಭ್ಯ ವಿರುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕ್ರಮ ವಹಿಸಬೇಕು.
– ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…