ಮೈಸೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಾಗಿರುವ ಸಯ್ಯಾಜಿರಾವ್ ರಸ್ತೆ, ಕುವೆಂಪುನಗರದ ನೃಪತುಂಗ ರಸ್ತೆ, ಕಾಳಿದಾಸ ರಸ್ತೆ, ಜೆ.ಪಿ.ನಗರದ ಅಕ್ಕಮಹಾದೇವಿ ರಸ್ತೆ, ಮಹಾತ್ಮ ಗಾಂಧಿ ವೃತ್ತ, ಅಶೋಕ ರಸ್ತೆಯೂ ಸೇರಿದಂತೆ ಇನ್ನಿತರ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸು ವುದರಿಂದ ಟ್ರಾಫಿಕ್ ಜಾಮ್ ಆಗಿ ಅಪಘಾತ ಗಳು ಸಂಭವಿಸುತ್ತಿವೆ.
ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೈಸೂರು ನಗರದ ಪ್ರಮುಖ ರಸ್ತೆಗಳ ಎರಡೂ ಬದಿಗಳಲ್ಲಿ ವಾಹನಗಳ ನಿಲುಗಡೆ ಗಾಗಿ ಬಿಳಿ ಬಣ್ಣ ಬಳಿಯಲಾಗಿದೆ. ಉಳಿದಿರುವ ರಸ್ತೆಗಳಿಗೂ ಕೂಡ ಮೈಸೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಸಂಚಾರ ಪೊಲೀಸರು ಬಿಳಿಬಣ್ಣ ಬಳಿಯ ಕ್ರಮ ವಹಿಸಿದರೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





