Andolana originals

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ) ಇತ್ತೀಚೆಗೆ ವರದಿ ಮಾಡಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.

ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿರುವುದೇ ಬಹುಪಾಲು ರೈತರ ಆತ್ಮಹತ್ಯೆಗೆ ಪ್ರಮುಖ ಕಾರಣವಾಗಿದೆ. ರೈತ ತಾನು ಮಾಡಿದ ಸಾಲವನ್ನು ತೀರಿಸಲಾಗದೇ ಮರ್ಯಾದೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಂದ ನೂರಾರು ಕೋಟಿ ರೂ. ಸಾಲ ಮಾಡಿ ಸರ್ಕಾರಕ್ಕೆ ಮೋಸ ಮಾಡಿದ ಯಾವೊಬ್ಬ ಉದ್ಯಮಿಯೂ ಇದುವರೆಗೂ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳಿಲ್ಲ. ರೈತ ದೇಶದ ಬೆನ್ನೆಲುಬು, ಅನ್ನದಾತ ಎಂದೆಲ್ಲಾ ಭಾಷಣ ಮಾಡುವ ನಮ್ಮ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳು ರೈತರ ಆತ್ಮಹತ್ಯೆಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು, ರೈತರು ಬೆಳೆದ ಎಲ್ಲಾ ರೀತಿಯ ಬೆಳೆಗಳನ್ನು ಸರ್ಕಾರ ಬೆಂಬಲ ಬೆಲೆಯಲ್ಲಿ ಕೊಂಡುಕೊಳ್ಳುವ ವ್ಯವಸ್ಥೆಯಾಗಬೇಕು, ಇದರಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಬಹುದು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ…

9 mins ago

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…

25 mins ago

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…

52 mins ago

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

2 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

2 hours ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

2 hours ago