ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರತ್ತ ನ್ಯಾಯಾಲಯದ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ರಾಕೇಶ್ ಕಿಶೋರ್ ಎಂಬ ವಕೀಲರು ಶೂ ಎಸೆದ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ವಕೀಲರೊಬ್ಬರು, ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಯವರತ್ತ ಶೂ ಎಸೆದಿರುವುದು ಬಹುಶಃ ಇದೇ ಪ್ರಥಮ ಎನ್ನಬಹುದು. ಈ ಪ್ರಕರಣದಲ್ಲಿ ಶೂ ಎಸೆದ ವಕೀಲರನ್ನು ಬಂಽಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು





