ಓದುಗರ ಪತ್ರ
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ ಒಂದು ಕಡೆ ಸಾರ್ವಜನಿಕರು ಮತ್ತೊಂದು ಕಡೆ ತಾವುಸಾಗುತ್ತಿದ್ದು, ಈ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಾಮಾನ್ಯರಲ್ಲಿ ಸಾಮಾನ್ಯರಂತೆ ತಮಿಳುನಾಡು ಮುಖ್ಯಮಂತ್ರಿ ರಸ್ತೆಯಲ್ಲಿ ಹೋಗಿರುವುದು ನಿಜಕ್ಕೂ ಶ್ಲಾಘನೀಯ ವಿಷಯವಾಗಿದೆ. ಪ್ರಧಾನ ಮಂತ್ರಿಗಳು,ಮುಖ್ಯಮಂತ್ರಿಗಳು, ಸಚಿವರು ಕಾರ್ಯನಿಮಿತ್ತ ಆಗಮಿಸುವ ವೇಳೆ ಅನೇಕ ರಸ್ತೆಗಳನ್ನು ಬಂದ್ ಮಾಡಿಸಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡೆತಡೆಗಳುಂಟಾಗುವಂತೆ ಮಾಡುವುದು ಸಾಮಾನ್ಯ. ಇಂತಹವರ ಮಧ್ಯೆ, ತಮಿಳುನಾಡಿನ ನೂತನ ಮುಖ್ಯಮಂತ್ರಿ ನಗರ ಪ್ರದೇಶದೊಳಗೆ ಜೀರೋ ಟ್ರಾಫಿಕ್ ಬಳಸದೆ ಸಾರ್ವಜನಿಕರ ನಡುವೆಯೇ ಸಾಗಿರುವುದು ದೇಶದ ಇತರ ಅಧಿಕಾರಸ್ಥ ರಾಜಕಾರಣಿಗಳಿಗೆ ಮಾದರಿಯಾಗಿದೆ. ಉನ್ನತ ಸ್ಥಾನಗಳಲ್ಲಿ ಇರುವವರು ಈ ನಡೆ ಅನುಸರಿಸಿದರೆ ರಸ್ತೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಆಗಲಾರದು.
-ನಾಗೇಶ್ , ಮಾನಸಗಂಗೋತ್ರಿ , ಮೈಸೂರು
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…