Mysore
25
broken clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

dgp murder case

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ ದಸರಾ, ಫಲಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ, ಆಹಾರ ಮೇಳಗಳು ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳೂ ಜನರಿಂದ ತುಂಬಿಹೋಗಿದ್ದವು.
ದಸರಾ ನೋಡಲು ಬಂದಿದ್ದ ಪ್ರವಾಸಿಗರಿಗೆ ಪೊಲೀಸ್ ಇಲಾಖೆಯು ಸೂಕ್ತ ಭದ್ರತೆ ನೀಡುವ ಜತೆಗೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಿ ದಸರಾ ಮಹೋತ್ಸವ ಯಶಸ್ವಿಯಾಗಲು ಶ್ರಮಿಸಿದ್ದಾರೆ, ಮಳೆ, ಗಾಳಿ, ಬಿಸಿಲು, ಹಗಲು-ರಾತ್ರಿ ಎನ್ನದೆ ಕಾರ್ಯನಿರ್ವಹಿಸಿದ ಪೊಲೀಸ್‌ ಸಿಬ್ಬಂದಿಗೆ ನಾಡಿನ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

Tags:
error: Content is protected !!