ಮಂಡ್ಯದಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು ಕಂಡಿದ್ದು, ಅಂದಾಜಿನ ಪ್ರಕಾರ ೬ ಲಕ್ಷ ಮಂದಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.
ಈವರೆಗೂ ನಡೆದ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲೇ ಇಷ್ಟೊಂದು ಮಂದಿ ಭಾಗವಹಿಸಿದ್ದು ಇದೇ ಮೊದಲು ಎಂದು ಹೇಳಲಾಗುತ್ತಿದ್ದು, ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಭಾಗವಹಿಸಿದ ಅಷ್ಟೂ ಜನರಿಗೆ ಯಾವುದೇ ತೊಂದರೆಯಾಗದಂತೆ ಊಟದ ವ್ಯವಸ್ಥೆ ಮಾಡಿದ ಜಿಲ್ಲಾಡಳಿತದ ಕಾರ್ಯವೈಖರಿ ಶ್ಲಾಘನೀಯ.
ಈ ಸಮ್ಮೇಳನದ ಯಶಸ್ಸಿಗೆ, ಪಕ್ಷಬೇಧ ಮರೆತು ಜಿಲ್ಲೆಯ ಜನ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ, ಸ್ವಯಂ ಸೇವಕರು ಕೆಲಸ ನಿರ್ವಹಿಸಿದ್ದಾರೆ. ಅವರೆಲ್ಲರ ಶ್ರಮದಿಂದಾಗಿ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಮಂಡ್ಯ ಜಿಲ್ಲೆಯ ಗೌರವ ಹೆಚ್ಚಾಗಿದೆ. ಸಮ್ಮೇಳನದ ಅಧ್ಯಕ್ಷರ ಆಯ್ಕೆಯಿಂದ ಹಿಡಿದು ಸಮ್ಮೇಳನದ ಸಮಾರೋಪ ಸಮಾರಂಭದವರೆವಿಗೂ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ವಿಲ್ಲದೆ ಸಮ್ಮೇಳನ ಯಶಸ್ವಿಯಾಗಿರುವುದು ಕನ್ನಡ ಸಾಹಿತ್ಯ ಪರಿಷತ್‌ನ ಇತಿಹಾಸದಲ್ಲೇ ಇದೇ ಮೊದಲು ಎನ್ನಬಹುದಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.