ನಾಡಹಬ್ಬ ಮೈಸೂರು ದಸರಾಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ದೀಪಾಲಂಕಾರ, ಬಸ್ ತಂಗುದಾಣ ಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸುಣ್ಣ, ಬಣ್ಣ ಬಳಿದು ಸಿಂಗರಿಸಲಾಗಿದೆ.
ಸಿಎಂ ಸೂಚನೆಯ ಮೇರೆಗೆ ನಗರದ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವುದರೊಂದಿಗೆ ಡಾಂಬರೀಕರಣ ಮಾಡಲಾಗಿದೆ. ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದಿದ್ದ ಕಸವನ್ನು ತೆರವುಗೊಳಿಸಲಾಗಿದ್ದು, ಫುಟ್‌ಪಾತ್ ಮೊದಲಾದ ಸ್ಥಳಗಳನ್ನು ದುರಸ್ತಿ ಪಡಿಸಲಾಗುತ್ತಿದ್ದು, ಇಡೀ ನಗರವೇ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.
ಇದನ್ನೂ ಓದಿ: ‘ಯಾವ ನಿಲ್ದಾಣವೂ ಅಂತಿಮವಾಗಿರಬಾರದು ಎನ್ನುವ ನಿಲ್ದಾಣಕ್ಕೆ ಬಂದಿದ್ದೇನೆ!’
ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶಗಳಿಂದ ಬರುವ ಪ್ರವಾಸಿಗರು ನಗರದ ಸೌಂದರ್ಯವನ್ನು ವರ್ಣಿಸುವಂತಾಗಿದೆ. ಆದರೆ ಇದು ದಸರಾ ಸಂಭ್ರಮ ಮುಗಿಯುವ ವರೆಗೆ ಮಾತ್ರ ಎಂಬುದು ವಿಪರ್ಯಾಸದ ಸಂಗತಿಯಾಗಿದೆ.
ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷವಿಡೀ ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೈಸೂರು ನಗರದ ರಸ್ತೆಗಳನ್ನು ದುರಸ್ತಿ ಮಾಡಿಸುವುದರೊಂದಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಆಗ ಸಾಂಸ್ಕೃತಿಕ ರಾಜಧಾನಿ ಇನ್ನಷ್ಟು ಸುಂದರವಾಗುತ್ತದೆ.
-ಶರತ್, ಮೈಸೂರು
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…