ಮುಂದಿನ ದಿನಗಳಲ್ಲಿ ಕ್ರಿಕೆಟ್ ಆಟಗಾರರಿಗೆ ಸಾಧನೆ ಆಧಾರದ ಮೇಲೆ ವೇತನ ನೀಡುವುದು ಹಾಗೂ ವಿದೇಶಿ ಪ್ರವಾಸದ ವೇಳೆ ಅವರ ಕುಟುಂಬದವರನ್ನು ಕರೆದುಕೊಂಡು ಹೋಗಲು ಅವಕಾಶ ನೀಡದಿರಲು ಭಾರತೀಯ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ ಎಂಬುದಾಗಿ ವರದಿಯಾಗಿದೆ.
ಇದು ಬಹು ಅಪೇಕ್ಷಿತ ಕ್ರಮವಾಗಿದ್ದು, ಕ್ರಿಕೆಟ್ ಪ್ರೇಮಿಗಳು ಈ ಕ್ರಮವನ್ನು ಸ್ವಾಗತಿಸುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಯಾವುದೇ ಸಾಧನೆ ಮಾಡದ ಆಟಗಾರರಿಗೂ ಲಕ್ಷ ರೂ. ಲೆಕ್ಕದಲ್ಲಿ ವೇತನ ನೀಡುತ್ತಿರುವ ಕ್ರಿಕೆಟ್ ಮಂಡಳಿಯ ಧೋರಣೆ ಬಹುಕಾಲ ದಿಂದಲೂ ಟೀಕೆಗೆ ಗುರಿಯಾಗಿತ್ತು. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಕೋಟಿ ರೂ.ಲೆಕ್ಕದಲ್ಲಿ ಸಂಭಾವನೆ ನೀಡುತ್ತಾರೆ. ಇದನ್ನು ಕೇಳಿದಾಗ ಆಶ್ಚರ್ಯವಾಗುತ್ತದೆ. ಆದರೆ ಮಳೆ, ಚಳಿ, ಬಿಸಿಲು ಎಂಬುದನ್ನೂ ಲೆಕ್ಕಿಸದೆ ಗಡಿಯಲ್ಲಿ ದೇಶಕಾಯುವ ಸೈನಿಕರಿಗೆ ಸರಿಯಾದ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಮೀನಮೇಷ ಎಣಿಸುತ್ತದೆ. ಆದರೆ ಕ್ರಿಕೆಟ್ ಆಟಗಾರರಿಗೆ ಹಾಗೂ ಅವರ ಕುಟುಂಬದವರಿಗೆ ಹಣವನ್ನು ವ್ಯಯಿಸುತ್ತದೆ. ಇತ್ತ ಸೈನಿಕರು ಕುಟುಂಬವನ್ನು ಬಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಾರೆ. ಆದರೆ ಕ್ರಿಕೆಟಿಗರು ಮಾತ್ರ ಕನಿಷ್ಠ ಎರಡು ತಿಂಗಳೂ ಕುಟುಂಬವನ್ನು ಬಿಟ್ಟಿರಲಾಗುವುದಿಲ್ಲವೇನೋ ಎಂಬಂತೆ ಅವರ ಕುಟುಂಬಕ್ಕೂ ಸಕಲ ಸೌಕರ್ಯವನ್ನು ಕಲ್ಪಿಸುತ್ತದೆ. ಇದು ಸರಿಯಾದ ಕ್ರಮವಲ್ಲ. ಸದ್ಯ ತಡವಾಗಿಯಾದರೂ ಕ್ರಿಕೆಟ್ ಆಡಳಿತ ಮಂಡಳಿಗೆ ಜ್ಞಾನೋದಯವಾಗಿದೆ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…
ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(45)…
ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…
ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ…
ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ. ಇಂದು ಸಂಜೆ ಮಕರ ಜ್ಯೋತ…
ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು…