ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು ಹೇಳಿರುವುದಾಗಿ ೩೧.೧೨.೨೫ರಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಸಾರ್ವಕಾಲಿಕ ಸತ್ಯವಾಗಿದೆ.ಮ ಸೂರ್ಯ ಮುಳುಗದ ಸಾಮ್ರಾಜ್ಯಎಂದು ಕರೆಯಲ್ಪಡುತ್ತಿದ್ದ ಬ್ರಿಟಿಷರು ೨೦೦ ವರ್ಷಗಳಿಗೂ ಹೆಚ್ಚು ಕಾಲ ನಮ್ಮನ್ನು ಆಳಿ ಸಾವಿರಾರು ಕೋಟಿ ರೂ.ಗಳಷ್ಟು ಸಂಪತ್ತನ್ನು ಕೊಳ್ಳೆ ಹೊಡೆದು ತಮ್ಮ ದೇಶಕ್ಕೆ ಸಾಗಿಸಿದರು.
ಸ್ವಾತಂತ್ರ್ಯ ಬಂದ ನಂತರ ಆಡಳಿತ ನಡೆಸಿದ ನಮ್ಮವರೇ ಆದ ಜನಪ್ರತಿನಿಧಿಗಳು ಭ್ರಷ್ಟಾಚಾರ ನಡೆಸಿ ಲೂಟಿ ಮಾಡಿ ದೇಶ ವಿದೇಶ ಗಳಲ್ಲಿ ಚರ/ಸ್ಥಿರ ಆಸ್ತಿ ಮಾಡಿದ್ದಾರೆ. ಶೇ.೯೦ರಷ್ಟು ಆಸ್ಪತ್ರೆಗಳು, ಸಕ್ಕರೆ ಕಾರ್ಖಾನೆಗಳು, ವೈದ್ಯಕೀಯ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಐಷಾರಾಮಿ ಹೋಟೆಲ್‌ಗಳು ಎಲ್ಲವೂ ಜನಪ್ರದಿನಿಧಿಗಳ ಒಡೆತನಕ್ಕೆ ಸೇರಿವೆ.
ನಾವು ಅಧಿಕಾರಕ್ಕೆ ಬಂದರೆ ಸ್ವಿಸ್ ಬ್ಯಾಂಕ್ ಹಣವನ್ನು ವಾಪಸ್ ತರುತ್ತೇವೆ. ಅದನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ಹಂಚುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದವರು ಕೊಟ್ಟ ಆಶ್ವಾಸನೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಹಿಡಿಯಲು ‘ಭರವಸೆಯ ಬಂಡವಾಳ ವೇ ಜೀವಾಳ’! ಜನರ ಮೂಗಿಗೆ ತುಪ್ಪ ಸವರಿ, ತಾವು ಮೃಷ್ಟಾನ್ನ ಭೋಜನ ಮಾಡುವುದೇ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆ….!
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…