ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಚಾಂಪಿಯನ್ ಆಗಿದ್ದು, ಕಡೆಗೂ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ. ೧೮ ವರ್ಷಗಳ ವನವಾಸದ ಬಳಿಕ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಜಯಗಳಿಸುವ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಅಲ್ಲದೆ ಈ ಆವೃತ್ತಿಯ ಆರಂಭದಿಂದಲೂ ಈ ಸಲ ಕಪ್ ನಮ್ದೆ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ, ಗೆಲುವಿನ ಉಡುಗೊರೆ ನೀಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೋಟ್ಯಂತರ ಅಭಿಮಾನಿಗಳ ಪರವಾಗಿ ಅಭಿನಂದನೆಗಳು.
– ಸಿದ್ದಲಿಂಗೇಗೌಡ ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.





