Mysore
21
broken clouds

Social Media

ಶುಕ್ರವಾರ, 02 ಜನವರಿ 2026
Light
Dark

ಓದುಗರ ಪತ್ರ: ಸಂತ್ರಸ್ತರಿಗೆ ಸರ್ಕಾರ ನೆರವು ನೀಡಲಿ

ಓದುಗರ ಪತ್ರ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳದಿಂದಾಗಿ ಅನೇಕ ಬಡ ಕುಟುಂಬಗಳು ಗ್ರಾಮಗಳನ್ನು ತೊರೆದಿವೆ. ಅಲ್ಲದೆ ಕೆಲವರು ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಅಂತಹವರಲ್ಲಿ ದಲಿತ ಕುಟುಂಬಗಳೇ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಅವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿರುವುದಾಗಿ ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದೆ.

ಸರ್ಕಾರ ಆರ್.ಅಶೋಕ್‌ರವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸುಗ್ರೀವಾಜ್ಞೆಯನ್ನು ಜಾರಿಗೆ ತರಬೇಕು. ಅಲ್ಲದೆ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು. ಸರ್ಕಾರದ ಅಽನದಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ಇನ್ನಿತರ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸ್ವಯಂ ಉದ್ಯೋಗಗಳನ್ನು ಸ್ಥಾಪಿಸಿಕೊಳ್ಳಲು ಸಹಾಯಧನವನ್ನು ನೀಡುವ ಜತೆಗೆ ಅವರು ಗಳಿಸುವ ಆದಾಯಕ್ಕನುಗುಣವಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಿದರೆ ಅವರು ಸಾಲಕ್ಕಾಗಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಮೊರೆ ಹೋಗುವುದು ತಪ್ಪುತ್ತದೆ. ಆದ್ದರಿಂದ ಸರ್ಕಾರ ಮೈಕ್ರೋ ಫೈನಾನ್ಸ್ ಕಂಪೆನಿಗಳಿಂದ ಕಿರುಕುಳ ಅನುಭವಿಸುತ್ತಿರುವ ಸಂತ್ರಸ್ತರ ನೆರವಿಗೆ ಬಂದು ಆತ್ಮಹತ್ಯೆ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕಿದೆ.

ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.

Tags:
error: Content is protected !!