ಓದುಗರ ಪತ್ರ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳದಿಂದಾಗಿ ಅನೇಕ ಬಡ ಕುಟುಂಬಗಳು ಗ್ರಾಮಗಳನ್ನು ತೊರೆದಿವೆ. ಅಲ್ಲದೆ ಕೆಲವರು ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಅಂತಹವರಲ್ಲಿ ದಲಿತ ಕುಟುಂಬಗಳೇ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಅವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿರುವುದಾಗಿ ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದೆ.
ಸರ್ಕಾರ ಆರ್.ಅಶೋಕ್‌ರವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸುಗ್ರೀವಾಜ್ಞೆಯನ್ನು ಜಾರಿಗೆ ತರಬೇಕು. ಅಲ್ಲದೆ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು. ಸರ್ಕಾರದ ಅಽನದಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ಇನ್ನಿತರ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸ್ವಯಂ ಉದ್ಯೋಗಗಳನ್ನು ಸ್ಥಾಪಿಸಿಕೊಳ್ಳಲು ಸಹಾಯಧನವನ್ನು ನೀಡುವ ಜತೆಗೆ ಅವರು ಗಳಿಸುವ ಆದಾಯಕ್ಕನುಗುಣವಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಿದರೆ ಅವರು ಸಾಲಕ್ಕಾಗಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಮೊರೆ ಹೋಗುವುದು ತಪ್ಪುತ್ತದೆ. ಆದ್ದರಿಂದ ಸರ್ಕಾರ ಮೈಕ್ರೋ ಫೈನಾನ್ಸ್ ಕಂಪೆನಿಗಳಿಂದ ಕಿರುಕುಳ ಅನುಭವಿಸುತ್ತಿರುವ ಸಂತ್ರಸ್ತರ ನೆರವಿಗೆ ಬಂದು ಆತ್ಮಹತ್ಯೆ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕಿದೆ.
–ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…
ಬೆಂಗಳೂರು: ಮಾರ್ಚ್.28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್…
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…