Andolana originals

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ ಸರ್ಕಾರದ ಮಂದಗತಿಯ ಧೋರಣೆ ಸರಿಯಲ್ಲ.

ಬರ ಆವರಿಸಿ ೪ ತಿಂಗಳು ಕಳೆದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ, ಕೇವಲ ೮೯ ತಾಲ್ಲೂಕುಗಳಲ್ಲಿ ತೀವ್ರ ಹಾಗೂ ೧೨ ತಾಲ್ಲೂಕುಗಳಲ್ಲಿ ಕಡಿಮೆ ಬರ ಎಂದು ಕಾಗದದ ಮೇಲೆ ವಿಂಗಡಿಸಿ ಕಾಲಹರಣ ಮಾಡುತ್ತಿರುವುದು ದುರಂತ. ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ, ಕೇವಲ ಅಂಕಿ-ಅಂಶಗಳ ನಾಟಕವಾಡಿದರೆ ರೈತನ ಖಾಲಿ ಹೊಟ್ಟೆ ತುಂಬುವುದಿಲ್ಲ.ಆಡಳಿತ ಮತ್ತು ವಿರೋಧ ಪಕ್ಷಗಳು ಕೇವಲ ರಾಜಕೀಯ ಬಾಣಗಳ ಬಿಡುವುದನ್ನು ಬಿಟ್ಟು, ಕಷ್ಟದಲ್ಲಿರುವ ರೈತರ ನೆರವಿಗೆ ತಕ್ಷಣ ಬರಬೇಕು.

ವಿಳಂಬವಿಲ್ಲದೆ ಸರ್ಕಾರ ೧೭೫ ತಾಲ್ಲೂಕುಗಳಿಗೆ ಸೂಕ್ತ ಪರಿಹಾರ ಹಣ ಬಿಡುಗಡೆ ಮಾಡಿ, ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು. ಅನ್ನದಾತನಿಗೆ ಜೀವದಾನ ನೀಡಲು ಸರ್ಕಾರ ತುರ್ತು ಕ್ರಮ ಕೈಗೊಳ್ಳುವುದು ಅತ್ಯಗತ್ಯ.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

9 mins ago

ಎಚ್.ಡಿ.ಕೋಟೆಯಲ್ಲಿ ಕಳೆಗಟ್ಟಿದ ನವರಾತ್ರಿ ಉತ್ಸವ

ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು…

20 mins ago

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

20 hours ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…

20 hours ago

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

21 hours ago