ಓದುಗರ ಪತ್ರ
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ ಅನಿಶ್ಚಿತ ಪರಿಸ್ಥಿತಿ ಮುಂದುವರಿದಿದೆ.
ಈಗಾಗಲೇ ಹಾರ್ಮುಜ್ ಜಲಸಂಧಿಯನ್ನು ತನ್ನ ವಶಕ್ಕೆ ಪಡೆದಿರುವ ಅಮೆರಿಕ ಈ ಜಲಸಂಧಿಯನ್ನು ದಾಟುವ ಎಲ್ಲಾ ಹಡಗುಗಳನ್ನು ಹೊಡೆದು ಉರುಳಿಸುವುದಾಗಿ ಬೆದರಿಕೆ ಹಾಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ಹುಚ್ಚಾಟಗಳಿಗೆ ಕೊನೆ ಮೊದಲೇ ಇಲ್ಲವಾಗಿವೆ. ಇದೀಗ ತಾನು ಏಸುಕ್ರಿಸ್ತನ ಅವತಾರವೆಂದು ಬಿಂಬಿಸಿಕೊಂಡು, ಮತ್ತೊಂದು ಕಪಿಚೇಷ್ಟೆ ಪ್ರಾರಂಭಿಸಿದ್ದು, ಇರಾನ್ ದೇಶವನ್ನು ವಿಶ್ವ ಭೂಪಟದಿಂದ ಅಳಿಸಿಹಾಕುವುದಾಗಿ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇವರ ಈ ಹುಚ್ಚಾಟಗಳಿಂದ ಇಡೀ ವಿಶ್ವವೇ ಆತಂಕಗೊಂಡಿದ್ದು, ಚೀನಾ, ರಷ್ಯಾ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳು ಇನ್ನಾದರೂ ಗಾಢ ನಿದ್ರೆಯಿಂದ ಎಚ್ಚೆದ್ದು ಅಮೆರಿಕ ಅಧ್ಯಕ್ಷರಿಗೆ ತಕ್ಕ ಪಾಠ ಕಲಿಸ ಬೇಕು.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…