ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಬಗೆಗಿನ ಆಲೋಚನೆಯನ್ನು ಕೈಬಿಡಬೇಕು ಎಂದು ಕನ್ನಡ ಕ್ರಿಯಾ ಸಮಿತಿ ಮತ್ತು ಶಾಸ್ತ್ರೀಯ ಕನ್ನಡ ಭಾಷಾ ಹೋರಾಟ ಸಮಿತಿ ನಿರ್ಣಯ ಕೈಗೊಂಡಿರುವುದು ಶ್ಲಾಘನೀಯ.
ಸ್ವಾಯತ್ತತೆ ಪಡೆದ ಬಳಿಕ ಶಾಸ್ತ್ರೀಯ ಕನ್ನಡಅತ್ಯುನ್ನತ ಅಧ್ಯಯನ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಿದರೆ ಮಾತ್ರ ಅಭಿವೃದ್ಧಿ ಕಾರ್ಯಗಳು ಪರಿಣಾಮಕಾರಿಯಾಗಿ ನಡೆಯಲು ಸಾಧ್ಯ ಎಂದು ಕನ್ನಡ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಹೇಳಿರುವುದು ಸೂಕ್ತವಲ್ಲ. ಕಳೆದ ೧೬ ವರ್ಷಗಳಿಂದಲೂ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ತನ್ನ ಕಾರ್ಯವನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸದಿರುವುದು ಬೇಸರದ ಸಂಗತಿ. ಇನ್ನಾದರೂ ಸ್ಥಳಾಂತರಿಸುವ ವಿಷಯಕ್ಕೆ ಇತಿಶ್ರೀ ಹಾಡಿ ಕನ್ನಡ ಭಾಷೆಯನ್ನು ಬೆಳೆಸುವ ಕಡೆಗೆ ಗಮನ ಹರಿಸುವುದು ಒಳ್ಳೆಯದು.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು.





