Mysore
29
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.

ಮಕ್ಕಳ ಪಾಲಿಗೆ ಸಾಮಾಜಿಕ ಜಾಲತಾಣಗಳು ಪಿಡುಗಾಗಿವೆ. ವಿದ್ಯಾರ್ಥಿಗಳ ಮೇಲೆ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮ ಆತಂಕಕಾರಿ ಬೆಳವಣಿಗೆ. ಅಲ್ಲದೆ ಮಕ್ಕಳ ಬೆಳವಣಿಗೆಗೂ ಮಾರಕ. ಶಾಲಾ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ತಮ್ಮ ಜೀವನ ಹಾಳು ಮಾಡಿಕೊಂಡಿರುವ ಹಲವು ಉದಾಹರಣೆಗಳಿವೆ. ಇಂತಹ ಪ್ರಕರಣಗಳು ಪ್ರತಿನಿತ್ಯ ಕೇಳಿ ಬರುತ್ತಿರುತ್ತವೆ.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿರುವ ಮೊಬೈಲ್ ಬಳಕೆಗೆ ಕಡಿವಾಣ ಬಿದ್ದರೆ ವಿದ್ಯಾರ್ಥಿಗಳಲ್ಲಿ ಶಿಸ್ತು, ನೆಮ್ಮದಿ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ. ಮೊಬೈಲ್ ಬಳಕೆಯಿಂದ ಮಕ್ಕಳ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಎಲ್ಲರ ಸಹಮತದೊಂದಿಗೆ ನಿಷೇಽಸುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

Tags:
error: Content is protected !!