Andolana originals

ಓದುಗರ ಪತ್ರ: ಎನ್‌ಪಿಎ ಹೆಚ್ಚಳ ಆತಂಕಕಾರಿ

ಕಳೆದ ಹತ್ತು ವರ್ಷಗಳಲ್ಲಿ ದೇಶದ ವಿವಿಧ ಬ್ಯಾಂಕುಗಳಲ್ಲಿ ರೈಟ್‌ ಆಫ್ ಮಾಡಿರುವ ಒಟ್ಟು ಸಾಲದ ಮೊತ್ತ (ಎನ್‌ಪಿಎ) 16.35 ಲಕ್ಷ ಕೋಟಿ ರೂ. ಎಂದು ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇತ್ತೀಚಿಗೆ ಲೋಕಸಭೆಗೆ ತಿಳಿಸಿದ್ದಾರೆ.
2023-24ನೇ ವಿತ್ತೀಯ ವರ್ಷದಲ್ಲಿ ಒಟ್ಟು 1.70 ಲಕ್ಷ ಕೋಟಿ ರೂ. ವಸೂಲಾಗದ ಸಾಲವನ್ನು ಲೈಟ್‌ಆಫ್ ಮಾಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ. ಈ ರೀತಿಯ ವಸೂಲಾಗದ ಸಾಲ ಅಥವಾ ಅನುತ್ಪಾದಕ ಆಸ್ತಿ (ಎನ್‌ಪಿಎ) ಪ್ರತಿ ಬ್ಯಾಂಕಿನಲ್ಲೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಇವುಗಳ ವಸೂಲಾತಿಯ ಬಗ್ಗೆ ಸಂಬಂಧಿಸಿದ ಬ್ಯಾಂಕುಗಳ ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳದಿರುವುದೇ ಎನ್‌ಪಿಎಗಳ ಹೆಚ್ಚಳಕ್ಕೆ ಕಾರಣವಾಗಿರಬಹದು. ಉದ್ಯಮಿ ವಿಜಯ್ ಮಲ್ಯ ಕೂಡ ದೇಶದ ಹಲವಾರು ಬ್ಯಾಂಕುಗಳಿಗೆ 9,000 ಸಾವಿರ ಕೋಟಿ ರೂ.ಗಳಷ್ಟು ಸಾಲದ ಹಣವನ್ನು ಮರು ಪಾವತಿಸದೇ ವಿದೇಶದಲ್ಲಿ ಅಡಗಿರುವುದು ಗುಟ್ಟಿನ ವಿಷಯವೇನಲ್ಲ. ಅವರನ್ನು ಭಾರತಕ್ಕೆ ಕರೆತರುವ ಕಾನೂನಿನ ಪ್ರಕ್ರಿಯೆಗೆ ಬಾಲಗ್ರಹ ಬಡಿದಂತೆ ಕಾಣುತ್ತದೆ. ವಿಜಯ್ ಮಲ್ಯರಂತೆ ಇನ್ನೂ ಹಲವಾರು ಉದ್ಯಮಿಗಳು ದೇಶದ ಸಾರ್ವಜನಿಕ ಬ್ಯಾಂಕುಗಳಿಂದ ಪಡೆದ ಲಕ್ಷಾಂತರ ಕೋಟಿ ರೂ. ಸಾಲ ವಸೂಲಾಗದೇ ಎನ್‌ಪಿಎ ಆಗುತ್ತಿರುವುದು ಅತ್ಯಂತ ಆತಂಕಕಾರಿಯಾದ ವಿಚಾರ.
ಆ‌ರ್‌ಬಿಐ ನೀಡಿರುವ ಮಾಹಿತಿಯಂತೆ 2024ರ ಡಿಸೆಂಬರ್ ಅಂತ್ಯಕ್ಕೆ ವಾಣಿಜ್ಯ ಬ್ಯಾಂಕುಗಳಳಲ್ಲಿ ತಲಾ 1,000 ಕೋಟಿ ರೂ.ಗಳಿಂತ ಹೆಚ್ಚಿನ ಸಾಲ ಪಡೆದು ಅದನ್ನು ಸರಿಯಾಗಿ ಮರಳಿಸದ 29 ಕಂಪೆನಿಗಳು ದೇಶದಲ್ಲಿ ಇವೆ. ಬ್ಯಾಂಕಿನಲ್ಲಿ ಇರುವ ಹಣ ದೇಶದ ಜನರ ಹಣ. ಇದನ್ನು ಮನಸೋ ಇಚ್ಛೆ ಸಾಲ ನೀಡಿ ಅನುತ್ಪಾದಕ ಆಸ್ತಿಯನ್ನಾಗಿ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರ ಹಾಗೂ ರಿಸರ್ವ್ ಬ್ಯಾಂಕ್‌ ಆಗಿಂದಾಗ್ಗೆ ಬ್ಯಾಂಕುಗಳ ಎನ್‌ಪಿಎ ಹೆಚ್ಚಾಗದಂತೆ ಕ್ರಮವಹಿಸಬೇಕು.
-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

45 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

46 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

48 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

50 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

54 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

58 mins ago