ಕೆಲದಿನಗಳ ಹಿಂದೆಯಷ್ಟೆ ಬೆಂಗಳೂರಿನ ಕೋರಮಂಗಲದ ಪಿಜಿಯೊಂದರಲ್ಲಿ ಯುವತಿಯನ್ನು ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿಯೇ ಅತ್ಯಾಚಾರದ ಪ್ರಕರಣವೊಂದು ವರದಿಯಾಗಿರುವುದು ಆತಂಕ ಮೂಡಿಸಿದೆ.
ಈ ಅತ್ಯಾಚಾರಿಗಳಿಗೆ ಮತ್ತು ಕೊಲೆಗಡುಕರಿಗೆ ಕಾನೂನಿನ ಭಯವಿಲ್ಲವೇನೋ ಅನಿಸುತ್ತದೆ. ಯಾವ ಅಂಜಿಕೆಯೂ ಇಲ್ಲದೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗುವುದು, ಅವರನ್ನು ಕೊಲೆ ಮಾಡುವ ದುಷ್ಕೃತ್ಯಗಳಿಗೆ ಇಳಿಯುತ್ತಿದ್ದಾರೆ. ನಗರ ಭಾಗಗಳಲ್ಲಿ ಇತ್ತೀಚೆಗೆ ನೈಟ್‌ಪಾರ್ಟಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಯುವಕ-ಯುವತಿಯರು ಮಧ್ಯರಾತ್ರಿಯವರೆಗೂ ಮೋಜು ಮಸ್ತಿ ಮಾಡಿಕೊಂಡು, ಪಾನಮತ್ತರಾಗಿ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಇಂತಹ ಬೆಳವಣಿಗೆಗಳಿಂದಾಗಿಯೂ ಅಪರಾಧ ಪ್ರಕರಣಗಳು ಹೆಚ್ಚಾಗಬಹುದು.
ಅಲ್ಲದೆ ಬೆಂಗಳೂರಿನಂತಹ ಬೃಹತ್ ನಗರಗಳಲ್ಲಿ ಗಾಂಜಾ, ಡ್ರಗ್ಸ್ ಸುಲಭವಾಗಿ ಯುವಸಮೂಹದ ಕೈ ಸೇರುತ್ತಿದೆ. ಅವುಗಳ ಸೇವನೆಯೂ ಇಂತಹ ದುಷ್ಕೃ ತ್ಯಗಳಿಗೆ ಪ್ರಚೋದಿಸಬಹುದು. ಆದ್ದರಿಂದ ಮೊದಲು ನಮ್ಮ ಕಾನೂನು-ವ್ಯವಸ್ಥೆ ಬದಲಾಗಬೇಕು. ಅತ್ಯಾಚಾರಿಗಳಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು. ರಾತ್ರಿಕೂಟಗಳನ್ನು ನಿರ್ಬಂಧಿಸುವ ಜತೆಗೆ ಗಾಂಜಾ, ಡ್ರಗ್ಸ್ ಸೇವನೆಗೆ ಕಡಿವಾಣ ಹಾಕಬೇಕು.
-ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…