ದೇಶದಲ್ಲಿ ಒಂದಲ್ಲಾ ಒಂದು ಕಡೆ ಅತ್ಯಾಚಾರದಂತಹ ಪ್ರಕರಣ ವರದಿ ಯಾಗುತ್ತಲೇ ಇದ್ದು, ಹೆಣ್ಣುಮಕ್ಕಳು ಮನೆಯಿಂದ ಹೊರಬರಲೂ ಆತಂಕಪಡುವಂತಾಗಿದೆ.
ಹೆಣ್ಣು ಮಕ್ಕಳನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಅಪಹರಿಸುವುದು, ಕೆಲಸ ಮಾಡುವ ಸ್ಥಳಗಳಲ್ಲಿ, ಶಾಲೆಗಳಲ್ಲಿ ಅವರ ಮೇಲೆ ದೌರ್ಜನ್ಯವೆಸಗುವುದು, ಕಾಲೇಜು, ಪಿಜಿಗಳಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡುವ ಪ್ರಕರಣಗಳನ್ನು ನೋಡಿದರೆ ಪೋಷಕರಿಗೆ ತಮ್ಮ ಮಕ್ಕಳನ್ನು ಮನೆ ಯಿಂದ ಹೊರಗೆ ಹೇಗೆ ಕಳುಹಿಸುವುದು ಎಂಬ ಚಿಂತೆ ಶುರುವಾಗಿದೆ.
ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರ್ಕಾರ ಎಷ್ಟೇ ಕಾನೂನುಗಳನ್ನು ರೂಪಿಸಿದರೂ ಅತ್ಯಾಚಾರಗಳು ನಿಲ್ಲುತ್ತಿಲ್ಲ. ಮಹಿಳೆಯರು ಎಲ್ಲೇ ಹೋದರೂ ಅವರ ಮೇಲಿನ ದೌರ್ಜನ್ಯಗಳು ಕಡಿಮೆಯಾಗುತ್ತಿಲ್ಲ. ಖಂಡಿತವಾಗಿಯೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸದ ಹೊರತಾಗಿ ಅತ್ಯಾಚಾರದಂತಹ ಅನಿಷ್ಟವನ್ನು ಕೊನೆಗಾಣಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ವಿದೇಶಗಳಲ್ಲಿ ಅತ್ಯಾಚಾರಿಗಳಿಗೆ ನೀಡುವ ಶಿಕ್ಷೆಯ ಮಾದರಿಯಲ್ಲಿಯೇ ಭಾರತದಲ್ಲಿಯೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. –
ಎಂ.ಎಸ್.ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ, ಮೈಸೂರು.
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…