ಓದುಗರ ಪತ್ರ
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ ವಶಕ್ಕೆ ಪಡೆಯಬೇಕು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ಹುಚ್ಚುತನಕ್ಕೆ ಅಥವಾ ಹುಂಬತನಕ್ಕೆ ವಿಶ್ವದ ಪ್ರಮುಖ ರಾಷ್ಟ್ರಗಳು ಛೀಮಾರಿ ಹಾಕಿವೆ. ೬೩ ಲಕ್ಷ ಕೋಟಿ ರೂ.ಗಳನ್ನು ಡೆನ್ಮಾರ್ಕ್‌ಗೆ ನೀಡಿ ಈ ದ್ವೀಪವನ್ನು ತನ್ನ ಕೈವಶ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಅಮೆರಿಕ ಡೆನ್ಮಾರ್ಕ್ ಮುಂದಿಟ್ಟಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಒಂದು ವೇಳೆ ಡೆನ್ಮಾರ್ಕ್ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದರೆ, ಅದರ ವಿರುದ್ಧ ಸೈನಿಕ ಕಾರ್ಯಾಚರಣೆ ನಡೆಸಲು ಕೂಡ ಅಮೆರಿಕ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಗ್ರೀನ್ ಲ್ಯಾಂಡ್ ನಲ್ಲಿರುವ ಅಪರೂಪದ ಖನಿಜ ಸಂಗ್ರಹಗಳ ಮೇಲೆ ಅಮೆರಿಕದ ಕಣ್ಣು ಬಿದ್ದಿದ್ದು, ಈ ದ್ವೀಪವನ್ನು ವಶಪಡಿಸಿಕೊಂಡು, ತನ್ನ ವಾಯು ರಕ್ಷಣೆ ವ್ಯವಸ್ಥೆಗೆ ಅನುವು ಮಾಡಿಕೊಡಲು ಟ್ರಂಪ್ ಆಡಳಿತ ನಿರ್ಧರಿಸಿದೆ ಎನ್ನಲಾಗಿದೆ. ಈ ದ್ವೀಪದಲ್ಲಿ ೩೯೭ ಲಕ್ಷ ಕೋಟಿ ರೂಪಾಯಿಗಳಷ್ಟು ಖನಿಜ ಸಂಪತ್ತಿದೆ ಎಂದು ಅಂದಾಜಿಸಲಾಗಿದೆ.
ಈಗಾಗಲೇ ವೆನುಜವೇಲಾದ ಅಧ್ಯಕ್ಷ ಹಾಗೂ ಅವರ ಪತ್ನಿಯನ್ನು ತನ್ನ ವಶಕ್ಕೆ ಪಡೆದುಕೊಂಡಿರುವ ಅಮೆರಿಕ ಈಗ ಇದೇ ಚಾಳಿಯನ್ನು ಗ್ರೀನ್ ಲ್ಯಾಂಡಿಗೂ ವಿಸ್ತರಿಸಿದೆ. ಮೆಕ್ಸಿಕೊ, ಕ್ಯೂಬಾ ದೇಶಗಳಿಗೂ ಇದೇ ರೀತಿಯ ಧಮಕಿ ಹಾಕಿರುವ ಅಮೆರಿಕದ ನಡೆ ಖಂಡನೀಯವಾಗಿದ್ದು, ಇಡೀ ವಿಶ್ವ ಸಮುದಾಯ ಅಮೆರಿಕದ ಇಂತಹ ಸಾಮ್ರಾಜ್ಯಶಾಹಿ ಭೀತಿಯ ವಿರುದ್ಧ ತಿರುಗಿ ಬೀಳಲು ಇದು ಸಕಾಲವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…