ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು. ಅಂದರೆ ಒಟ್ಟು ೧೨೦ ದಿನಗಳ ಲೆಕ್ಕ. ಆದರೆ ಕೆಲವು ವರ್ಷಗಳಿಂದ ಸ್ವಾಮೀಜಿಗಳ ವಯಸ್ಸಿನ ಪರಿಣಾಮದಿಂದ ಅಥವಾ ಅವರ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿನ ವ್ಯತ್ಯಾಸದಿಂದಾಗಿ ಕೇವಲ ೪೮ ದಿನ ಅಂದರೆ ಒಂದು ಮಂಡಲ ಮುಗಿಸಿ ಎದ್ದುಬಿಡುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅದನ್ನು ೩೦ ದಿನ ಅಂದರೆ ಕೇವಲ ಒಂದು ತಿಂಗಳಿಗೆ ಮೊಟಕುಗೊಳಿಸುತ್ತಿರುವುದು ಎಷ್ಟು ಸಮಂಜಸ? ಇದು ಚಾತುರ್ಮಾಸ ಪದದ ಅರ್ಥವನ್ನು ಕಳೆದುಕೊಳ್ಳುತ್ತಿದೆ. ಒಂದು ವೇಳೆ ಮುಖ್ಯ ಸ್ವಾಮೀಜಿಗಳಿಗೆ ವಯಸ್ಸಾಗಿದ್ದರೆ ಅವರ ಉತ್ತರಾಧಿಕಾರಿಯನ್ನು ಆ ಸ್ಥಾನದಲ್ಲಿ ಕುಳಿತುಕೊಳ್ಳುವಂತೆ ಸಲಹೆ ನೀಡಬಹುದು. ಇನ್ನು ಮುಂದಾದರೂ ಚಾತುರ್ಮಾಸದ ದಿನಗಳಲ್ಲಿ ಮಠಾಧೀಶರು ಕನಿಷ್ಠ ಪಕ್ಷ ಒಂದು ಮಂಡಲ ಅಂದರೆ ೪೮ ದಿನಗಳನ್ನಾದರೂ ಪೂರೈಸಿದರೆ ಚಾತುರ್ಮಾಸ ಎಂಬ ಪದಕ್ಕೆ ಅರ್ಥ ಬರುತ್ತದೆ.
– ಜಿ.ಪಿ.ಹರೀಶ್, ಮೈಸೂರು
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…