ಓದುಗರ ಪತ್ರ
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ ಶುಲ್ಕವನ್ನೂ ಏಕಾಏಕಿ ಶೇ.೧೦೦ರಷ್ಟು ಏರಿಸಿದೆ. ಅಂದರೆ ಈ ಹಿಂದೆ ಪ್ರತಿ ತಿಂಗಳು ಇದ್ದ ಯುಜಿಡಿ ಶುಲ್ಕ ೩೮ ರೂ. ನಿಂದ ೭೫ ರೂ.ಗಳಿಗೆ ಏರಿಕೆಯಾಗಿದೆ. ಪ್ರತಿ ನೀರು ಬಳಕೆದಾರರ ಮನೆಯ ಒಳ ಚರಂಡಿ ನಿರ್ವಹಣೆಯನ್ನೂ ತೆರಿಗೆದಾರರೇ ನಿರ್ವಹಿಸುತ್ತಿದ್ದು, ಹೊರಗಿನ ಒಳಚರಂಡಿಗಳಿಗೆ ಪಾಲಿಕೆ ಏನು ನಿರ್ವಹಣೆ ಮಾಡುತ್ತಿದೆ ಎಂಬುದನ್ನು ಬಲ್ಲವರೇ ತಿಳಿಸಬೇಕು. ಒಟ್ಟಾರೆ ಹಾಲು, ಕರೆಂಟು, ಬಸ್ಸು ಪ್ರಯಾಣ ದರದೊಂದಿಗೆ ನೀರಿನ ಕಂದಾಯವನ್ನೂ ಹೆಚ್ಚಿಸಿರುವುದು ಜನ ಸಾಮಾನ್ಯರಿಗೆ ಇನ್ನಷ್ಟು ಹೊರೆಯಾಗಿದೆ. ಸರ್ಕಾರ ಖಾಲಿಯಾಗಿರುವ ಬೊಕ್ಕಸವನ್ನು ತುಂಬಿಕೊಳ್ಳಲು ಎಲ್ಲಾ ದರಗಳನ್ನು ಏರಿಸುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದೇ ದುಸ್ತರವಾಗಿದೆ.
-ವಿಜಯ್ ಹೆಮ್ಮಿಗೆ, ಮೈಸೂರು
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…