ಮೈಸೂರು ಜಿಲ್ಲೆಯ ೩೦ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ)ದಿಂದ ಪಿಯುಸಿವರೆಗೂ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗುತ್ತದೆ.
ಸರ್ಕಾರ ೫ನೇ ತರಗತಿಯವರೆಗೆ ಪಠ್ಯಕ್ರಮ ಆಧಾರಿತ ಶಿಕ್ಷಣ ಹಾಗೂ ೬ನೇ ತರಗತಿಯಿಂದ ವೃತ್ತಿಪರ ತರಬೇತಿ ಶಿಕ್ಷಣ ನೀಡಲು ಕ್ರಮ ಕೈಗೊಂಡಿರುವುದು ಉತ್ತಮ ನಿರ್ಧಾರವಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಸ್‌ಸಿ ನಂತರ ಐಟಿಐ, ಡಿಪ್ಲೊಮಾ ವೃತ್ತಿ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ. ಅರ್ಧದಲ್ಲೇ ಶಾಲೆ ಬಿಡುವ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗುತ್ತದೆ. ಸರ್ಕಾರಿ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗುತ್ತದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.





