Andolana originals

ಓದುಗರ ಪತ್ರ: ಕೆಪಿಎಸ್ ಶಾಲೆಗಳ ಆರಂಭ ಸ್ವಾಗತಾರ್ಹ

ಮೈಸೂರು ಜಿಲ್ಲೆಯ ೩೦ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ)ದಿಂದ ಪಿಯುಸಿವರೆಗೂ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗುತ್ತದೆ.

ಸರ್ಕಾರ ೫ನೇ ತರಗತಿಯವರೆಗೆ ಪಠ್ಯಕ್ರಮ ಆಧಾರಿತ ಶಿಕ್ಷಣ ಹಾಗೂ ೬ನೇ ತರಗತಿಯಿಂದ ವೃತ್ತಿಪರ ತರಬೇತಿ ಶಿಕ್ಷಣ ನೀಡಲು ಕ್ರಮ ಕೈಗೊಂಡಿರುವುದು ಉತ್ತಮ ನಿರ್ಧಾರವಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಸ್‌ಸಿ ನಂತರ ಐಟಿಐ, ಡಿಪ್ಲೊಮಾ ವೃತ್ತಿ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ. ಅರ್ಧದಲ್ಲೇ ಶಾಲೆ ಬಿಡುವ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗುತ್ತದೆ. ಸರ್ಕಾರಿ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗುತ್ತದೆ.

 – ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 mins ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

47 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

1 hour ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

10 hours ago