Mysore
25
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಓದುಗರ ಪತ್ರ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ ಎದುರು ಮಾಹಿತಿ ನೀಡುವ ಫಲಕಗಳು ಬಿಸಿಲು, ಮಳೆಯಿಂದ ಮಾಸಿ ಹೋಗಿವೆ. ಪಾರಂಪರಿಕ ಕಟ್ಟಡಗಳ ಎದುರು ಫಲಕಗಳನ್ನು ಹಾಕುವ ಮೂಲಕ ಸಾರ್ವಜನಿಕರಿಗೆ ಅವುಗಳ ವಿಶೇಷತೆ, ನಿರ್ಮಾಣಗೊಂಡ ವರ್ಷ ಮೊದಲಾದ ವಿಷಯಗಳ ಬಗ್ಗೆ ಮಾಹಿತಿ ಒದಗಿಸಲಾಗಿದೆ.

ಮೈಸೂರು ಮಹಾನಗರ ಪಾಲಿಕೆಯು ಬಹುತೇಕ ಮಾಹಿತಿ ಫಲಕಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸದೆ ಇರುವ ಕಾರಣ ಮಸುಕಾಗಿ ಹಾಗೂ ಅಳಿಸಿ ಹೋಗಿದ್ದು, ಪ್ರವಾಸಿಗರಿಗೆ ಈ ಬಗ್ಗೆ ಯಾವುದೇ ಮಾಹಿತಿ ದೊರೆಯುವುದಿಲ್ಲ. ಮಹಾನಗರ ಪಾಲಿಕೆಯ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಪಾರಂಪರಿಕ ಕಟ್ಟಡಗಳ ಬಗ್ಗೆ ಮಾಹಿತಿ ನೀಡುವ ಫಲಕಗಳಿಗೆ ಬಣ್ಣ ಬಳಿದು ಮೊದಲಿನಂತೆ ಸಂಕ್ಷಿಪ್ತ ಮಾಹಿತಿಯನ್ನು ಬರೆಸುವ ಮೂಲಕ ಪ್ರವಾಸಿಗರಿಗೆ, ಸ್ಥಳೀಯರಿಗೆ ಕಟ್ಟಡಗಳ ಬಗ್ಗೆ ಮಾಹಿತಿ ಸಿಗುವಂತೆ ಮಾಡುವುದು ಅಗತ್ಯ.

 -ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

 

Tags:
error: Content is protected !!