Andolana originals

ಓದುಗರ ಪತ್ರ: ಶಾಲಾ ಮಟ್ಟಕ್ಕೂ ಆವರಿಸಿದ ರ‍್ಯಾಗಿಂಗ್ ಭೂತ

ರ‍್ಯಾಗಿಂಗ್ ಎಂಬ ಭೂತ ಶಾಲಾ ಮಟ್ಟಕ್ಕೂ ಕಾಲಿಟ್ಟಿರುವುದು ಆತಂಕಕಾರಿ ಸಂಗತಿಯಾಗಿದೆ. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಇತ್ತೀಚೆಗೆ ಸೀನಿಯರ್ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗೆ ಹಣ ತರುವಂತೆ ಒತ್ತಡ ಹೇರಿದ್ದು, ಹಣ ತರದೇ ಇದ್ದಾಗ ಅವನ ಗುಪ್ತಾಂಗದ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿರುವುದು ಆತಂಕಕಾರಿ ಸಂಗತಿಯಾಗಿದೆ.

ಗಾಯಾಳು ವಿದ್ಯಾರ್ಥಿಯ ಪೋಷಕರು ಶಾಲೆಯ ಆಡಳಿತ ಮಂಡಳಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಶಾಲಾ ಆಡಳಿತ ಮಂಡಳಿ ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ನೊಂದ ವಿದ್ಯಾರ್ಥಿಯ ಆರೋಗ್ಯವನ್ನು ವಿಚಾರಿಸಿ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಆಡಳಿತ ಮಂಡಳಿಯು ನೋಡಿಕೊಳ್ಳಬೇಕು. ಪೋಷಕರಿಗೆ ಧೈರ್ಯ ಹೇಳಿ ಇನ್ನು ಮುಂದೆ ಹೀಗಾಗದಂತೆ ಭರವಸೆ ತುಂಬಬೇಕು.

ಶಾಲೆಯ ಎಲ್ಲಾ ಮಕ್ಕಳ ಚಲನವಲನಗಳನ್ನು ಗಮನಿಸಬೇಕು. ಶಿಸ್ತು ಉಲ್ಲಂಸಿ ದುರ್ವರ್ತನೆ ತೋರುವ ಹಾಗೂ ಬುದ್ಧಿವಾದ ಹೇಳಿದರೂ ವರ್ತನೆಯನ್ನು ತಿದ್ದಿಕೊಳ್ಳದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಗೆ ಕಳುಹಿಸುವ ಮೂಲಕ ಉತ್ತಮ ವಾತಾವರಣವನ್ನು ನಿರ್ಮಿಸುವ ಜವಾಬ್ದಾರಿ ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿಯದ್ದಾಗಿರುತ್ತದೆ.

– ಎಂ.ಎಸ್.ಉಷಾ  ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

5 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

7 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

7 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

8 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

8 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

8 hours ago