Andolana originals

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ ಕಳೆದುಕೊಂಡ ಮೊತ್ತ ಹಲವಾರು ಲಕ್ಷಗಳನ್ನು ಮೀರುತ್ತಿರುವುದರಿಂದ, ಆರ್‌ಬಿಐ ನೀಡುವ ಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅನ್ನುವ ಹಾಗಿದೆ. ಆದರೂ ಕೂಡ ಇದೊಂದು ಒಳ್ಳೆಯ ಉಪಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಈ ಪರಿಹಾರದ ಮೊತ್ತ ಹೆಚ್ಚಾಗುವ ಸಾಧ್ಯತೆಯಿದೆ. ದೇಶಾದ್ಯಂತ ಸೈಬರ್ ವಂಚನೆ ದಿನೇ ದಿನೇ ಹೆಚ್ಚುತ್ತಿದೆ. ಅಮಾಯಕರನ್ನು ‘ ಡಿಜಿಟಲ್ ಅರೆಸ್ಟ್’ ಮೂಲಕ ತಮ್ಮ ಬಲೆಗೆ ಕೆಡವಿಕೊಂಡು ಲಕ್ಷಾಂತರ ರೂಪಾಯಿಗಳನ್ನು ಲಪಟಾಯಿಸುವ ವಂಚಕರ ಜಾಲ ಇಡೀ ದೇಶಾದ್ಯಂತ ಹರಡಿರುವುದು ಅತ್ಯಂತ ಕಳವಳಕಾರಿಯಾದ ವಿಚಾರವಾಗಿದೆ. ಇದರ ಬಗ್ಗೆ ದೇಶದ ಸರ್ವೋಚ್ಚ ನ್ಯಾಯಾಲಯ ಕೂಡ ತೀವ್ರ ಕಳವಳ ವ್ಯಕ್ತಪಡಿಸಿ, ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಬಂಧ ಸಕಾಲಿಕ ಕ್ರಮ ಕೈಗೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇತರ ಬ್ಯಾಂಕುಗಳಿಗೆ ಇತ್ತೀಚೆಗೆ ನಿರ್ದೇಶನ ನೀಡಿದೆ. ಡಿಜಿಟಲ್ ವಂಚನೆಗಳಿಂದ ದೇಶಾದ್ಯಂತ ರೂ. ೫೪ ಸಾವಿರ ಕೋಟಿಗಳಿಗಿಂತ ಅಧಿಕ ಹಣ ದೋಚಿರುವುದನ್ನು ಸಂಪೂರ್ಣ ದರೋಡೆ ಅಥವಾ ಡಕಾಯಿತಿ ಪ್ರಕರಣವೆಂದು ಹೇಳಿರುವ ಸುಪ್ರೀಂ ಕೋರ್ಟ್ ಭವಿಷ್ಯದಲ್ಲಿ ಇಂತಹ ಪ್ರಕರಣಗಳನ್ನು ತಡೆಯಲು ಮಾರ್ಗೋಪಾಯಗಳನ್ನು ಸೂಚಿಸುವಂತೆಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ತುರ್ತು ಕ್ರಮ ತೆಗೆದುಕೊಳ್ಳುವುದು ತೀರಾ ಅಗತ್ಯವಾಗಿದೆ. ಅದೇ ರೀತಿಸಾರ್ವಜನಿಕರು, ಇಂತಹ ಸೈಬರ್ ವಂಚನೆಯ ಬಗ್ಗೆ ಸಾಕಷ್ಟು ಜಾಗೃತರಾಗಿರುವುದು ಅಗತ್ಯ .

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

41 mins ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

43 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

45 mins ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

49 mins ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

52 mins ago

ಸಿದ್ದಾಪುರದಲ್ಲೊಂದು ವಿಂಟೇಜ್ ಕಸದ ತೊಟ್ಟಿ!

ಕೃಷ್ಣ ಸಿದ್ದಾಪುರ ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನ; ನಿಂತಿರುವ ಲಾರಿಯೊಳಗೆ ರಾಶಿ ರಾಶಿ ಕಸ ಸಿದ್ದಾಪುರ: ಸ್ವಚ್ಛತೆ ಬಗ್ಗೆ ಎಷ್ಟೇ…

59 mins ago