Mysore
32
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಡಿಜಿಟಲ್ ವೇದಿಕೆಗಳಲ್ಲಿ ಅಶ್ಲೀಲತೆಯ ಆರ್ಭಟ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು ಮತ್ತು ಸೆಲೆಬ್ರಿಟಿಗಳು ೩೯೯ ರೂ. ಚಂದಾದಾರಿಕೆ ಹೆಸರಿನಲ್ಲಿ ಅರೆನಗ್ನ ಚಿತ್ರ ಹಾಗೂ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುವುದು ಯುವ ಪೀಳಿಗೆಯ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರುತ್ತಿದೆ. ಕೇವಲ ಆರ್ಥಿಕ ಲಾಭಕ್ಕಾಗಿ ನೈತಿಕತೆಯ ಗಡಿ ಮೀರುವುದು ಅಭಿವ್ಯಕ್ತಿ ಸ್ವಾತಂತ್ರ್ಯವಲ್ಲ.

ಅದು ಸಾಂಸ್ಕ ತಿಕ ಅವನತಿ. ವಿಪರ್ಯಾಸವೆಂದರೆ ಇಂತಹ ವಿವಾದಗಳು ಸಾರ್ವಜನಿಕವಾಗಿ ಚರ್ಚೆಯಾದಾಗ ಅವರ ಫಾಲೋವರ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಸಮಾಜದ ಮೌಲ್ಯಚ್ಯುತಿಯನ್ನು ಎತ್ತಿ ತೋರಿಸುತ್ತದೆ. ತಂತ್ರಜ್ಞಾನವು ಪ್ರಗತಿಗೆ ಪೂರಕವಾಗಿರಬೇಕೇ ಹೊರತು ವಿಕೃತಿಗೆ ರಹದಾರಿಯಾಗಬಾರದು. ಸೈಬರ್ ಕಾನೂನುಗಳು ಕೇವಲ ದೂರು ದಾಖಲಿಸುವುದಕ್ಕೆ ಸೀಮಿತವಾಗದೆ ಇಂತಹ ಅಸಭ್ಯತೆಯ ವ್ಯಾಪಾರಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕಿದೆ. ಡಿಜಿಟಲ್ ವೇದಿಕೆಗಳಲ್ಲಿ ಘನತೆ ಮತ್ತು ಸಂಸ್ಕಾರವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನೈತಿಕತೆಯನ್ನು ಬಲಿಕೊಟ್ಟು ಪಡೆಯುವ ಜನಪ್ರಿಯತೆ ತಾತ್ಕಾಲಿಕ ಎಂಬ ಅರಿವು ಎಲ್ಲರಲ್ಲಿ ಮೂಡಲಿ.

-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು

Tags:
error: Content is protected !!