ಓದುಗರ ಪತ್ರ
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ ನೀರು ನಿಂತು ದುರ್ನಾತ ಬೀರುತ್ತಿದೆ. ಪ್ಲಾಸ್ಟಿಕ್ ಕವರ್‌ಗಳು ಸೇರಿ ಇನ್ನಿತರ ತ್ಯಾಜ್ಯ,ಕಸ ಕಡ್ಡಿಗಳು ಮೋರಿಯಲ್ಲಿ ಬಿದ್ದು ತುಂಬಾ ಕೆಟ್ಟ ವಾಸನೆ ಬರುತ್ತಿರುವುದು ಒಂದೆಡೆಯಾದರೆ, ಚಾಮರಾಜನಗರದ ವಿವಿಧ ಸ್ಥಳಗಳ ಕೆಲ ಮೋರಿಗಳು ಹಾಗೂ ಮೋರಿ ಪಕ್ಕದಲ್ಲಿಯೂ ವಿಪರೀತ ಪ್ರಮಾಣದ ಪ್ಲಾಸ್ಟಿಕ್ ಕವರ್‌ಗಳು ಮತ್ತು ಕಸವನ್ನು ಹಾಕುತ್ತಿರುವುದರಿಂದ ನಗರದಲ್ಲಿ ಸ್ವಚ್ಛತೆಯೇ ಇಲ್ಲದಂತಾಗಿದೆ. ಜೊತೆಗೆ ನಗರದ ಸೌಂದರ್ಯವೂ ಹಾಳಾಗುತ್ತಿರುವುದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಸಾಂಕ್ರಾಮಿಕ ರೋಗ – ರುಜಿನಗಳು ಹರಡುವ ಭೀತಿಯಿಂದಲೇ ಬದುಕುವಂತಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಚಾಮರಾಜನಗರದ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ನಗರಸಭೆ ಆಡಳಿತ ಕೂಡಲೇ ಸಾರ್ವಜನಿಕರಲ್ಲಿ ಸ್ವಚ್ಛತೆಯೊಂದಿಗೆ ನಗರದ ಸೌಂದರ್ಯ ಕಾಪಾಡಲು ಜಾಗೃತಿ ಮೂಡಿಸುವ ಮೂಲಕ, ಜಿಲ್ಲಾ ಕೇಂದ್ರದ ಘನತೆಯನ್ನು ಉಳಿಸಲು ಮುಂದಾಗಬೇಕೆಂದು ಮನವಿ.
-ನಾಗೇಶ್, ಮಾನಸಗಂಗೋತ್ರಿ ಮೈಸೂರು
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…