ಓದುಗರ ಪತ್ರ
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ ,೧೫ ನಿಮಿಷಗಳಿಗಿಂತಲೂ ಹೆಚ್ಚಿನ ಏಕಾಗ್ರತೆ ಅವರಲ್ಲಿ ನಿಲ್ಲುವುದು ಕಷ್ಟ, ಹೆಚ್ಚು ಪ್ರಶ್ನೆಗಳನ್ನು ಕೇಳುವ ಅವರ ಮನಸ್ಥಿತಿ ಅರ್ಥಮಾಡಿಕೊಂಡು ಸಮಾಧಾನದಿಂದ ಉತ್ತರಿಸಿದರೆ ಬದಲಾವಣೆ ಖಂಡಿತ ಸಾಧ್ಯ, ಶಿಕ್ಷಕರು ಮತ್ತು ಪೋಷಕರು ಇದನ್ನು ಅರ್ಥಮಾಡಿಕೊಂಡು ಬದಲಾಗಬೇಕಿದೆ ಎಂದು ಮುದ್ದೇನಹಳ್ಳಿಯ ಸತ್ಯಸಾಯಿಗ್ರಾಮ ಆಶ್ರಮದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಹಾಸನದಲ್ಲಿ ನಡೆದ ದಿವ್ಯ ಸಂಜೆ ಕಾರ್ಯಕ್ರಮದಲ್ಲಿ ವಿಶ್ಲೇಷಿಸಿರುವುದು ಪ್ರಶಂಸನೀಯ.
ಸಮಾಜದಲ್ಲಿ ಬದಲಾವಣೆ ಆಗಬೇಕಾದರೆ ಶಿಕ್ಷಣ ವ್ಯವಸ್ಥೆಯಲ್ಲಿ ನೀತಿ ಪಾಠಗಳು ಮತ್ತೆ ಶಿಕ್ಷಣ ವ್ಯವಸ್ಥೆಯ ಭಾಗವಾಗಬೇಕು. ಶಾಲಾ ಚಟುವಟಿಕೆಗಳಲ್ಲಿ ಪೋಷಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಮತ್ತು ವಿಶ್ವವಿದ್ಯಾಲಯಗಳಲ್ಲಿ ಕೌಶಲ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಬೇಕು.ಇಂದಿನ ಉದ್ಯೋಗಿಗಳ ಪೈಕಿ ಶೇ. ೯೨ ರಷ್ಟು ಮಂದಿಯ ಓದಿಗೂ ಹಾಗೂ ಕೆಲಸಕ್ಕೂ ಸಂಬಂಧವೇ ಇಲ್ಲ ಎಂದು ಸದ್ಗುರುಗಳು ವ್ಯಾಖ್ಯಾನ ಮಾಡಿರುವುದು ಅರ್ಥಪೂರ್ಣವಾಗಿದೆ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…
ಕೀರ್ತಿ ಬೈಂದೂರು ಇಳಿಬಿಟ್ಟ ಕೂದಲು, ಹೆಚ್ಚೆನಿಸಿದರೂ ಕಡಿಮೆಯಾಗದ ನಗು, ಸಮತೂಕದ ದನಿ, ಬೊಗಸೆ ಪ್ರೀತಿಗೆ ಸಾಗರದಷ್ಟು ವಾತ್ಸಲ್ಯವನ್ನು ಮೊಗೆದು ಕೊಡಲು…