ಓದುಗರ ಪತ್ರ
ಇವಿಎಂ ಬದಲು ಬ್ಯಾಲೆಟ್ ಪೇpರ್‌ಗಳ ಮೂಲಕ ಮತದಾನ ಮಾಡುವ ವ್ಯವಸ್ಥೆಯನ್ನು ಮರುಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು ಸ್ವಾಗತಾರ್ಹ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಲಿದೆ.
‘ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ಒಪ್ಪಿಕೊಳ್ಳುತ್ತಾರೆ. ಸೋತವರು ಇವಿಎಂಗಳಲ್ಲಿ ದೋಷವಿದೆ ಎಂದು ಆರೋಪಿಸುತ್ತಾರೆ. ಸೋತಾಗ ಆರೋಪಿಸುವುದು ಸಾಮಾನ್ಯ. ಹೀಗಾಗಿ ಇಂಥ ವಾದಗಳನ್ನು ಮಂಡಿಸಲು ಇದು ಸೂಕ್ತ ಜಾಗ ಅಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿರುವುದು ಪ್ರಶಂಸನೀಯ.
ಚುನಾವಣೆಗಳಲ್ಲಿನ ತಾಂತ್ರಿಕ ವ್ಯವಸ್ಥೆಗಳ ಭದ್ರತೆ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರಲ್ಲಿ ಎದ್ದಿರುವ ಸಂದೇಹಗಳು ಹಾಸ್ಯಾಸ್ಪದ ಅನಿಸುತ್ತದೆ. ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದರೆ ಅದು ನ್ಯಾಯಯುತ ಸೋತರೆ ಇವಿಎಂನಲ್ಲಿ ದೋಷವಿದೆ ಎಂದು ಆರೋಪಿಸುತ್ತಾರೆ. ಇದು ಚುನಾವಣಾ ವ್ಯವಸ್ಥೆಯನ್ನೇ ಅನುಮಾನಿಸಿದಂತಾಗುತ್ತದೆ’ ಎಂದಿರುವ ಸುಪ್ರೀಂ ಕೋರ್ಟ್ ಇವಿಎಂ ಮೂಲಕವೇ ಚುನಾವಣೆಗಳನ್ನು ನಡೆಸುವುದನ್ನೇ ಮುಂದುವರಿಸಲು ಆದೇಶಿಸಿದ್ದು, ಈ ತೀರ್ಪು ಜನರಿಗೆ ಚುನಾವಣಾ ವ್ಯವಸ್ಥೆಯ ಮೇಲೆ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…