ಮಕ್ಕಳಿಗೆ ಶಿಕ್ಷಣ ನೀಡಿ, ಅವರನ್ನು ಸರಿ ದಾರಿಯಲ್ಲಿ ನಡೆಯುವಂತೆ ಮಾಡಬೇಕಾದ ಶಿಕ ಕನೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಅಗಸನಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ ಕ ಗಿರೀಶ್ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ ಎನ್ನಲಾಗಿದೆ.
ಈ ಶಾಲೆಗೆ ಸಿದ್ದಾಪುರ, ಕಲ್ಲಹಟ್ಟಿ, ಅಗಸನಹುಂಡಿ, ಅಗಸನಹುಂಡಿ ಕಾಲೋನಿ ಗ್ರಾಮಗಳ ವಿದ್ಯಾರ್ಥಿಗಳು ಬರುತ್ತಾರೆ. ಶಿಕ್ಷಕ ಗಿರೀಶ್ ವಿದ್ಯಾರ್ಥಿನಿಯರನ್ನು ತನ್ನ ಕೊಠಡಿಗೆ ಕರೆಸಿಕೊಂಡು ಬಾಗಿಲು, ಕಿಟಕಿಗಳನ್ನು ಮುಚ್ಚಿ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಆರೋಪಿಸಲಾಗಿದ್ದು, ಮಕ್ಕಳಿಗೆ ಪೌಷ್ಟಿಕಾಂಶ ವೃದ್ಧಿಗಾಗಿ ನೀಡುವ ಕಬ್ಬಿಣಾಂಶದ ಮಾತ್ರೆಗಳ ಬದಲಾಗಿ ಬೇರೆ ಮಾತ್ರೆಗಳನ್ನು ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ಕೆಲ ಶಿಕ್ಷಕರಿಂದಲೇ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯಗಳಾಗುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಆತಂಕಪಡುವಂತಾಗಿದೆ. ಅಲ್ಲದೆ ಇಂತಹವರಿಂದ ಪವಿತ್ರವಾದ ಶಿಕ್ಷಕ ವೃತ್ತಿಗೂ ಅಪಮಾನವಾದಂತಾಗಿದೆ. ಆದ್ದರಿಂದ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶಿಕ್ಷಕ ಗಿರೀಶ್ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.





