Andolana originals

ಓದುಗರ ಪತ್ರ: ಕಾಮುಕ ಶಿಕ್ಷಕನಿಗೆ ಕಠಿಣ ಶಿಕ್ಷೆಯಾಗಲಿ

ಮಕ್ಕಳಿಗೆ ಶಿಕ್ಷಣ ನೀಡಿ, ಅವರನ್ನು ಸರಿ ದಾರಿಯಲ್ಲಿ  ನಡೆಯುವಂತೆ ಮಾಡಬೇಕಾದ ಶಿಕ ಕನೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಅಗಸನಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ ಕ ಗಿರೀಶ್ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ  ಎನ್ನಲಾಗಿದೆ.

ಈ  ಶಾಲೆಗೆ ಸಿದ್ದಾಪುರ, ಕಲ್ಲಹಟ್ಟಿ, ಅಗಸನಹುಂಡಿ,  ಅಗಸನಹುಂಡಿ  ಕಾಲೋನಿ  ಗ್ರಾಮಗಳ  ವಿದ್ಯಾರ್ಥಿಗಳು  ಬರುತ್ತಾರೆ.  ಶಿಕ್ಷಕ ಗಿರೀಶ್ ವಿದ್ಯಾರ್ಥಿನಿಯರನ್ನು ತನ್ನ ಕೊಠಡಿಗೆ ಕರೆಸಿಕೊಂಡು ಬಾಗಿಲು, ಕಿಟಕಿಗಳನ್ನು ಮುಚ್ಚಿ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಆರೋಪಿಸಲಾಗಿದ್ದು, ಮಕ್ಕಳಿಗೆ ಪೌಷ್ಟಿಕಾಂಶ ವೃದ್ಧಿಗಾಗಿ ನೀಡುವ ಕಬ್ಬಿಣಾಂಶದ ಮಾತ್ರೆಗಳ ಬದಲಾಗಿ ಬೇರೆ ಮಾತ್ರೆಗಳನ್ನು ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.  ಇತ್ತೀಚಿನ  ದಿನಗಳಲ್ಲಿ ಕೆಲ ಶಿಕ್ಷಕರಿಂದಲೇ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯಗಳಾಗುತ್ತಿರುವುದರಿಂದ  ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಆತಂಕಪಡುವಂತಾಗಿದೆ. ಅಲ್ಲದೆ ಇಂತಹವರಿಂದ ಪವಿತ್ರವಾದ ಶಿಕ್ಷಕ ವೃತ್ತಿಗೂ ಅಪಮಾನವಾದಂತಾಗಿದೆ.  ಆದ್ದರಿಂದ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶಿಕ್ಷಕ ಗಿರೀಶ್  ಮೇಲೆ  ಕಠಿಣ ಕಾನೂನು  ಕ್ರಮ  ಜರುಗಿಸಬೇಕಿದೆ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

7 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

7 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

8 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

8 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

8 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

9 hours ago