Andolana originals

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಇನ್ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿಲ್ಲ ಎಂದು ತಿಳಿಸಿದ್ದರು. ಮೂಲ ವಿಡಿಯೋವನ್ನು ನೋಡಿದಾಗ ಧನಂಜಯ ಅವರು ಶಾಂತಿ ಸಭೆಯಲ್ಲಿ ಕಾನೂನು, ಸುವ್ಯವಸ್ಥೆಯ ದೃಷ್ಟಿಯಿಂದ ಮಾತನಾಡಿದ್ದಾರೆ. ಇದರಲ್ಲಿ ಯಾವುದೇ ತಪ್ಪುಗಳು ಕಂಡು ಬಂದಿಲ್ಲ.ಯೂಟ್ಯೂಬ್ ಚಾನಲ್ನವರು ಅವರ ಹೇಳಿಕೆಯನ್ನು ತಿರುಚಿರುವುದರಿಂದ ಈ ಅವಾಂತರಕ್ಕೆ ಕಾರಣವಾಗಿದೆ.

ತಾಲ್ಲೂಕಿನ ಎಲ್ಲಾ ಸಮುದಾಯದ ಯುವಕರು, ಯಾವುದೇ ಪ್ರಚೋದನಾತ್ಮಕ ಹೇಳಿಕೆ ನೀಡುವ ವ್ಯಕ್ತಿಗಳ ಮಾತಿಗೆ ಕಿವಿಗೊಡದೆ ಶಾಂತಿಯುತವಾಗಿ ಗಣೇಶೋತ್ಸವವನ್ನು ಆಚರಿಸಬೇಕು.

ಆಲಗೂಡು ಶಿವಕುಮಾರ್, ಮೈಸೂರು ಜಿಲ್ಲಾ ದಸಂಸ ಸಂಚಾಲಕ 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 mins ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

4 mins ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 mins ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

9 mins ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

14 mins ago

ಮ.ಬೆಟ್ಟದಲ್ಲಿವೆ ೪೩ ಅನಧಿಕೃತ ವಸತಿಗೃಹಗಳು!

ಮಹಾದೇಶ್ ಎಂ.ಗೌಡ ಗ್ರಾಮ ಪಂಚಾಯಿತಿಗೆ ವಾರ್ಷಿಕ ೧೨ ರಿಂದ ೧೫ ಲಕ್ಷ ರೂ.ನಷ್ಟ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಹನೂರು: ತಾಲ್ಲೂಕಿನ…

22 mins ago