Andolana originals

ಓದುಗರ ಪತ್ರ: ಲಿಂಗದೇವರಕೊಪ್ಪಲಿನಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ ತೆರಳುವ ಕರ್ನಾಟಕ ಸಾರಿಗೆ ಬಸ್‌ಗಳನ್ನು ಗ್ರಾಮದಲ್ಲಿ ನಿಲ್ಲಿಸುತ್ತಿಲ್ಲ.

ಮೈಸೂರಿನ ಸಬ್ ಅರ್ಬನ್ ನಿಲ್ದಾಣದಿಂದ ಹೊರಡುವ ಸಾರಿಗೆ ನಿಗಮದ ಬಸ್‌ಗಳು ರಾಮಸ್ವಾಮಿ ವೃತ್ತ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ, ಪಡುವಾರಹಳ್ಳಿ, ಬಿ. ಎಂ.ಆಸ್ಪತ್ರೆ, ಹಿನಕಲ್, ಹೂಟಗಳ್ಳಿ, ಬೆಳವಾಡಿ ನಂತರ ಮತ್ತೆ ಈ ಬಸ್ ಗಳು ನಿಲ್ಲುವುದು ಇಲವಾಲದಲ್ಲಿ. ಬೆಳವಾಡಿ ಹಾಗೂ ಇಲವಾಲದ ಮಧ್ಯೆ ಇರುವ ಲಿಂಗದೇವರಕೊಪ್ಪಲು ಗ್ರಾಮದಲ್ಲಿ ಸಾರಿಗೆ ನಿಗಮದ ಬಸ್‌ಗಳು ನಿಲ್ಲುತ್ತಿಲ್ಲ. ಈ ಗ್ರಾಮದಲ್ಲಿ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯ, ಗೋಕುಲ್ ದಾಸ್ ಹಾಗೂ ಶಾಹಿ ಎಕ್ಸ್‌ಪೋರ್ಟ್‌ನ ಗಾರ್ಮೆಂಟ್ಸ್ ಗಳ ಮಹಿಳಾ ಹಾಗೂ ಪುರುಷ ನೌಕರರು ಹಾಗೂ ಇತರ ಪ್ರಯಾಣಿಕರು ಪ್ರತಿನಿತ್ಯ ಪ್ರಯಾಣಿಸುತ್ತಾರೆ. ಅಲ್ಲದೇ ಇದೇ ಗ್ರಾಮದ ಅನತಿ ದೂರದಲ್ಲಿ ನಂಜಮ್ಮ ಜವರೇಗೌಡ ಆಸ್ಪತ್ರೆಗೆ ಬರುವ ರೋಗಿಗಳು ಅವರ ಪಾಲಕರು, ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್‌ಗೆ ಬರುವ ವಿದ್ಯಾರ್ಥಿಗಳು ಅವರ ಪೋಷಕರು, ವಿನಾಯಕ ಗಾರ್ಡನ್ ಸಿಟಿಯ ನಿವಾಸಿಗಳು ಅವರ ಸಂಬಂಧಿಕರು ಇಲ್ಲಿಗೆ ಬರುತ್ತಾರೆ. ಆದ್ದರಿಂದ ಸಾರಿಗೆ ನಿಗಮದ ಮೈಸೂರು ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಲಿಂಗದೇವರ ಕೊಪ್ಪಲು ಗ್ರಾಮದಲ್ಲಿ ಸಾರಿಗೆ ನಿಗಮದ ಬಸ್‌ಗಳ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು.

 -ಮಂಜುನಾಥ್, ಲಿಂಗದೇವರುಕೊಪ್ಪಲು, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

13 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

13 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

14 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

14 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

14 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

18 hours ago