ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಧನುರ್ಮಾಸ ವಿಶೇಷ ಪೂಜಾ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳು ಹೆಚ್ಚು ಬರುವುದರಿಂದ ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ಹಿರಿಯ ನಾಗರಿಕರು, ಮಹಿಳೆಯರು, ಪುರುಷರು ಎಲ್ಲರೂ ಒಟ್ಟಾಗಿ ತೆರಳಬೇಕಾಗಿದೆ.
ಈವೇಳೆಯಲ್ಲಿ ಹಿರಿಯ ನಾಗರಿಕರು ಮತ್ತು ಮಹಿಳೆಯರು ಹೆಚ್ಚು ಸಮಯ ನಿಲ್ಲುವುದಕ್ಕೆ ಆಗದೆ, ತೊಂದರೆ ಅನುಭವಿಸುವಂತಾಗಿದೆ. ನೂಕು ನುಗ್ಗಲು ಉಂಟಾಗಿ ತೊಂದರೆಯಾಗುತ್ತಿದೆ. ಹಿರಿಯ ನಾಗರಿಕರಿಗೆ ದೇವಾಲಯದಲ್ಲಿ ಶೀಘ್ರ ದರ್ಶನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಸರದಿ ಸಾಲುಗಳಲ್ಲಿ ಶ್ರೀಕಂಠೇಶ್ವರನ ದರ್ಶನಕ್ಕೆ ಅವಕಾಶ ಕಲ್ಪಿಸಲು ದೇವಾಲಯ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





