ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಅಂಗವಾಗಿ ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿರುವುದರಿಂದ ಪ್ರತಿನಿತ್ಯ ಸಾವಿರಾರು ಜನರು ಸೇರುತ್ತಾರೆ. ಅರಮನೆ ಆವರಣದಲ್ಲಿ ಪ್ರೇಕ್ಷಣೀಯ ಸ್ಥಳಗಳ ಬಳಿ ಸಿಸಿ ಕ್ಯಾಮೆರಾ, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಸಿಸಿ ಕ್ಯಾಮೆರಾಗಳು ಹಾಳಾಗಿದ್ದರೆ ಸಂಬಂಧಪಟ್ಟವರು ಕೂಡಲೇ ದುರಸ್ತಿಗೆ ಕ್ರಮಕೈಗೊಳ್ಳುವ ಮೂಲಕ ಸಾರ್ವಜನಿಕರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ ಮೈಸೂರು





