Andolana originals

ಓದುಗರ ಪತ್ರ: ಈ ಫಲಿತಾಂಶ ವಿಧಾನಸಭೆ ಚುನಾವಣೆ ದಿಕ್ಸೂಚಿ ಅಲ್ಲ

ರಾಜ್ಯದ ವಿಧಾನ ಪರಿಷತ್ತಿನ ತಲಾ ಎರಡು ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಎನ್‌ಡಿಎ ಅಭ್ಯರ್ಥಿಗಳು ಗೆಲವು ಸಾಧಿಸಿರುವುದು ಗಮನಾರ್ಹವಾಗಿದೆ.

ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದರೆ, ಒಂದು ಕ್ಷೇತ್ರದಲ್ಲಿ ಜಾ.ದಳ ಅಭ್ಯರ್ಥಿ ಗೆದ್ದಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಇದ್ದ ಒಂದು ಸ್ಥಾನವನ್ನೂ ಕಳೆದುಕೊಂಡಿದೆ.

ಈ ಫಲಿತಾಂಶದಿಂದ ಬೀಗುತ್ತಿರುವ ಕೆಲವು ಬಿಜೆಪಿ ಹಾಗೂ ಜಾ.ದಳ ನಾಯಕರು ಇದು ಮುಂಬರುವ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಎಂದು ಹೇಳಿದ್ದಾರೆ. ಆದರೆ ಖಂಡಿತ ಇದು ಸರಿಯಲ್ಲ. ವಿಧಾನ ಸಭೆ ಚುನಾವಣೆಯ ವಿಷಯಗಳೇ ಬೇರೆ, ವಿಧಾನ ಪರಿಷತ್ತಿನ ಚುನಾವಣೆಯ ವಿಷಯಗಳೇ ಬೇರೆ. ಹೀಗಾಗಿ ಇದಕ್ಕೂ, ೨೦೨೮ ರ ವಿಧಾನಸಭಾ ಚುನಾವಣೆಗೂ ತಾಳೆ ಹಾಕುವುದು ಸರಿಯಲ್ಲ. ಆದರೂ ಈ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಸ್ವಲ್ಪಮಟ್ಟಿಗೆ ಹಿನ್ನಡೆ ಉಂಟುಮಾಡಿದೆ ಎಂದು ಹೇಳಬಹುದು.

– ಕೆ.ವಿ.ವಾಸು, ಮೈಸೂರು

ಆಂದೋಲನ ಡೆಸ್ಕ್

Recent Posts

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ! ಕಿಲೋಮೀಟರ್‌ಗಟ್ಟಲೆ ಸರತಿ ಸಾಲು

ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ಸಂಭ್ರಮ ಮುಂದುವರಿದಿದೆ. ದರ್ಶನದ ಮೂರನೇ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ…

19 mins ago

ದೆಹಲಿಯಲ್ಲಿ ಮಾಲಿನ್ಯಕ್ಕೆ ಕಡಿವಾಣ: ಶೇ.50 ಸಿಬ್ಬಂದಿಗೆ ಮನೆಯಿಂದಲೇ ಕೆಲಸ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ವರದಿಯಾಗಿದೆ.…

23 mins ago

ಕರ್ನಾಟಕಕ್ಕೆ ₹4,504 ಕೋಟಿ ಹೆಚ್ಚುವರಿ ತೆರಿಗೆ ಪಾಲು ಬಿಡುಗಡೆ!

ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ ತೆರಿಗೆ ಪಾಲಿನ ಕಂತನ್ನು ಬಿಡುಗಡೆ ಮಾಡಿದ್ದು, ಕರ್ನಾಟಕಕ್ಕೆ 4,504 ಕೋಟಿ ರೂಪಾಯಿ ಹಂಚಿಕೆಯಾಗಿದೆ…

27 mins ago

ಎಲ್ಲೆಡೆ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ!

ಮೈಸೂರು: ಹಳದಿ–ಕೆಂಪಿನ ರಂಗು… ಕನ್ನಡದ ಕಂಪು… ಕರುನಾಡೆಲ್ಲ ರಾಜ್ಯೋತ್ಸವದ ಸಂಭ್ರಮ! ನಮ್ಮ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೆಮ್ಮೆಯಿಂದ…

29 mins ago

ಧಾರವಾಡದ ‘ಅಗ್ದಿ ಖರೆ’ ಕನ್ನಡ

‘ಅವರಿಲ್ರಿ ಮನ್ಯಾಗ ಹಿಂದಾಗಡೆ ಬರ್ರಿ’ ಎಂದು ಹೇಳಿದ ಧಾರವಾಡ ಮಹಿಳೆಗೆ ಬೆಂಗಳೂರಿಗನೊಬ್ಬ ಹಿಂದಗಡೆ ಹೋಗಿದ್ದನಂತೆ ‘ಹವಣಿ ಇರಲಿ’ ಉಳ್ಳಾಗಡ್ಡಿ ಹೆಚ್ಚುವ…

33 mins ago

ಕುಂದಾಪ್ರ ಕನ್ನಡವೆಂದರೆ ‘ಭಾಷಿ ಅಲ್ಲ; ಬದ್ಕ್

‘ಒಣ ಮೀನ್ ಚಟ್ನಿ, ಕೊಚ್ಚಕ್ಕಿ ಗಂಜಿ ಇದ್ರೆ ಉಂಡಾತ್’ ಎನ್ನುವ ನಮ್ಮೂರವರಿಗೆ ಕುಂದಾಪ್ರ ಕನ್ನಡ ಬದುಕೇ ಹೌದು ಆಷಾಢ ಮಾಸದ…

35 mins ago