ಓದುಗರ ಪತ್ರ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಕೂಡ ಅವರು ರಾಜೀನಾಮೆ ನೀಡಿದ್ದರು. ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಎರಡು ಬಾರಿ ರಾಜೀನಾಮೆ ನೀಡಿರುವುದು ಒಂದು ಅಪರೂಪದ ಪ್ರಕರಣವೆನ್ನಬಹುದು. ಅವರ ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ಪಕ್ಷಗಳು ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನದಲ್ಲಿ ಸಾಕಷ್ಟು ಪ್ರತಿಭಟನೆ ನಡೆಸಿದ್ದವು. ನಾಗೇಂದ್ರರವರ ರಾಜೀನಾಮೆ ಯನ್ನು ಮುಖ್ಯಮಂತ್ರಿಗಳು ಆಗಲೇ ಪಡೆದಿದ್ದರೆ, ರಾಜ್ಯ ಸರ್ಕಾರ ಎದುರಿಸಿತ್ತಿದ್ದ ಮುಜುಗರ ಪ್ರಮಾಣ ಕಡಿಮೆಯಾಗುತ್ತಿತ್ತು. ಅದೇನೇ ಇರಲಿ, ಪ್ರಕರಣದ ತನಿಖೆ ಮುಕ್ತಾಯಗೊಂಡು, ಅವರು ನಿರಪರಾಧಿ ಎಂದು ಸಾಬೀತಾದಲ್ಲಿ ಅವರು ಮತ್ತೆ ಸಂಪುಟ ಸೇರಬಹುದು. ಇಂದಿನ ರಾಜಕಾರಣದಲ್ಲಿ ಯಾರೂ ಸಾಚಾ ಅಲ್ಲ. ಬಿಜೆಪಿ ಆಳ್ವಿಕೆಯ ಕಾಲದಲ್ಲಿ ಕೂಡ ಸಾಕಷ್ಟು ಹಗರಣಗಳು ನಡೆದಿವೆ. ಒಟ್ಟಿನಲ್ಲಿ ಇಂದಿನ ರಾಜಕಾರಣ ಗಬ್ಬೆದ್ದು ಹೋಗಿರುವುದು ಪ್ರಜ್ಞಾವಂತರಲ್ಲಿ ಬೇಸರ ಮೂಡಿಸಿದೆ.
-ಕೆ.ವಿ.ವಾಸು, ಮೈಸೂರು
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…