ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರದಲ್ಲಿ ಬುದ್ಧನ ವಿಗ್ರಹವನ್ನುಭಗ್ನಗೊಳಿಸಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿರುವವರಿಗೆ ಕಠಿಣ ಶಿಕ್ಷೆಯಾಗಬೇಕು.
ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದಲೇ ದೇಶದ ಪ್ರಜೆಗಳಿಗೆ ಹಕ್ಕು ಮತ್ತು ಕರ್ತವ್ಯಗಳು ದೊರೆತಿದ್ದು, ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಿಶ್ವಕ್ಕೆ ಶಾಂತಿಯ ಸಂದೇಶವನ್ನು ಸಾರಿದ ಬುದ್ಧರ ಪ್ರತಿಮೆಯನ್ನು ಭಗ್ನಗೊಳಿಸುವ ಮೂಲಕ ವಿಕೃತಿ ಮೆರೆದಿರುವುದು ನಾಗರಿಕರು ತಲೆ ತಗ್ಗಿಸುವಂತೆ ಮಾಡಿದೆ. ಮಹಾಪುರುಷರ ಪ್ರತಿಮೆಗಳಿಗೆ ಅಪಮಾನವೆಸಗಿದವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಇನ್ನು ಮುಂದೆ ಇಂತಹ ದುಷ್ಕೃತ್ಯಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
-ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು





