ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದಿದೆ.ಆದರೆ ಎಷ್ಟೋ ರಾಜಕೀಯ ವ್ಯಕ್ತಿಗಳು ವೇದಿಕೆ ಮೇಲೆ ಒಂದು ಧರ್ಮದ ಬಗ್ಗೆ ದ್ವೇಷ ಭಾಷಣ ಮಾಡುವುದರಿಂದ ಸಮಾಜಕ್ಕೆ ಏನನ್ನು ನೀಡಲು ಸಾಧ್ಯ? ಈ ರೀತಿ ಭಾಷಣ ಮಾಡುವವರನ್ನು ನಿರ್ಬಂಧಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಇಂತಹ ಕಾನೂನುಗಳು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತವೆ ಎಂಬುದೂ ಮುಖ್ಯವಾಗುತ್ತದೆ.
ಇದನ್ನೂ ಓದಿ:-ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?
ಇಂದಿಗೂ ಎಷ್ಟೋ ಹಳ್ಳಿಗಳಲ್ಲಿ ಸಾಮಾಜಿಕ ಬಹಿಷ್ಕಾರ, ಅಸ್ಪೃಶ್ಯತೆ, ಜಾತಿ ಆಚರಣೆಗಳು ಚಾಲ್ತಿಯಲ್ಲಿ ಇವೆ. ಇಂತಹ ಆಚರಣೆಗಳ ವಿರುದ್ಧ ಇರುವ ಕಾನೂನುಗಳನ್ನು ಅನುಷ್ಠಾನಗೊಳಿಸುವಲ್ಲಿ ಪೊಲೀಸರು, ಅಧಿಕಾರಿಗಳು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎನ್ನುವುದೂ ಪ್ರಶ್ನೆಯಾಗಿದೆ. ಈಗಾಗಲೇ ಜಾರಿಯಲ್ಲಿರುವ ಇಂತಹ ಕಾನೂನುಗಳ, ಪ್ರಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ? ಎಷ್ಟು ಜನರಿಗೆ ಕಾನೂನಿನ ಶಿಕ್ಷೆ ಆಗಿದೆ. ಒಂದು ಧರ್ಮವನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುವವರ ಮೇಲೆ ಕ್ರಮ ಕೈಗೊಳ್ಳುವವರಿಗೂ ಕಾನೂನಿನ ಶಿಕ್ಷೆ ಆಗಲೇಬೇಕು. ಅವರು ಯಾರೇ ಆಗಿರಲಿ.ಈ ರೀತಿಯ ಭಾಷಣಗಳು ಮುಂದಿನ ಪೀಳಿಗೆಗೆ ಏನು ಸಂದೇಶ ನೀಡುತ್ತವೆ ಎಂಬುದನು ಎಲ್ಲರೂ ಅರಿಯಬೇಕು.
-ಎನ್.ಆಶಾ, ಬೆಂಗಳೂರು





