ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಕ್ರಮ ಸ್ವಾಗತಾರ್ಹ . ಇದರೊಂದಿಗೆ ಇನ್ನೂ ಹೆಚ್ಚಿನ ಕ್ರಮಗಳ ಅವಶ್ಯಕತೆ ಇದೆ. ದೇಶದಲ್ಲಿ ಜನಸಂಖ್ಯೆಯ ಶೇ.೧೦ಕ್ಕಿಂತಲೂ ಹೆಚ್ಚು ಜನರು ಹೊಗೆ ರಹಿತ ತಂಬಾಕು ಸೇವನೆ ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ
ಪ್ರತಿವರ್ಷ ಸುಮಾರು ೩.೭ ಲಕ್ಷ ಮಂದಿ ಬಾಯಿ ಕ್ಯಾನ್ಸರ್‌ನಿಂದ ಪ್ರಾಣ ಕಳೆದುಕೊಳ್ಳುತ್ತಿರುವುದು ಗಂಭೀರ ಪರಿಸ್ಥಿತಿಯನ್ನು ತೋರುತ್ತದೆ. ಉತ್ಪಾದನಾ ಸಾಮರ್ಥ್ಯಕ್ಕೆ ತೆರಿಗೆ ವಿಧಿಸುವ ಮೂಲಕ ಬಳಕೆ ಸ್ವಲ್ಪ ಮಟ್ಟಿಗೆ ಕಡಿಮೆಯಾದರೂ ಕಠಿಣ ನಿಯಂತ್ರಣ, ಜಾಹೀರಾತು ನಿಷೇಧ, ಮತ್ತು ವ್ಯಸನ ವಿಮೋಚನೆ ಕಾರ್ಯಕ್ರಮಗಳಿಲ್ಲದೆ ನಿಜವಾದ ಪರಿಣಾಮ ಕಷ್ಟ ಸಾಧ್ಯ. ರಾಜ್ಯಗಳು ಈ ಸೆಸ್‌ನಿಂದ ತಮ್ಮ ಪಾಲಿಗೆ ಬರುವ ಆದಾಯವನ್ನು ಪಾರದರ್ಶಕವಾಗಿ ಕ್ಯಾನ್ಸರ್ ತಪಾಸಣೆ, ಗ್ರಾಮೀಣ ಭಾಗದ ಜನರ ಆರೋಗ್ಯ ಜಾಗೃತಿ, ಮತ್ತು ವ್ಯಸನ ನಿರ್ಮೂಲನಾ ಕೇಂದ್ರಗಳಿಗೆ ಬಳಸಬೇಕು.
-ಡಾ. ಎಚ್.ಕೆ. ವಿಜಯಕುಮಾರ, ಬೆಂಗಳೂರು
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…